ವಡಗೇರಾ: ಮಾಜಿ ಸಂಸದರಾದ ಡಿಕೆ ಸುರೇಶ ರವರು ಕನಕಪುರ ತಾಲ್ಲೂಕಿನ ಬಮೂಲ್ ಹಾಲು ಒಕ್ಕೂಟದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿ ಅವಿರೋಧವಾಗಿ ಆಯ್ಕೆಯಾಗಿರುವ ಡಿ.ಕೆ ಸುರೇಶರವರಿಗೆ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥರೆಡ್ಡಿ ಚೆನ್ನೂರು ಜೆ. ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸನ್ಮಾನಿಸಿದರು.
ರೈತರ ಹೈನುಗಾರಿಕೆಯ ಸಮಸ್ಯೆಗಳ ವಿರುದ್ಧ ಧ್ವನಿಯೆತ್ತಿ ಹೈನುಗಾರಿಕೆಯ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಪರವಾಗಿ ಬೆಂಬಲಕ್ಕೆ ನಿಲ್ಲುವಂತೆ ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ರೆಡ್ಡಿ ಚೆನ್ನೂರು ಜೆ ರವರು ಮನವಿ ಮಾಡಿಕೊಂಡರು.
ಮನವಿಗೆ ಸ್ಪಂದಿಸಿದ ನಿರ್ದೇಶಕ ಡಿಕೆ ಸುರೇಶ್ ರವರು ಮಾತನಾಡಿ ನಾನು ರೈತರ ಪರವಾಗಿದ್ದು ರೈತರ ಅಭಿವೃದ್ಧಿಗೆ ಶ್ರಮಿಸುವುದಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡ ಭೀಮಾಶಂಕರ ಹೊಸಮನಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.