
ಪ್ರಜಾವಾಣಿ ವಾರ್ತೆಬಸನಗೌಡ ಪಾಟೀಲ ಯತ್ನಾಳ
ಗುರುಮಠಕಲ್: ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸೋಮವಾರ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.
‘ಪಟ್ಟಣದಲ್ಲಿ ಶನಿವಾರ (ಫೆ.21) ನಡೆದ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮದಲ್ಲಿ ಯತ್ನಾಳ ಅವರು ಭಾಷಣ ಮಾಡುತ್ತಿದ್ದ ವೇಳೆ ಮುಸ್ಲಿಂ ಸಮುದಾಯ, ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಟಿಪ್ಪು ಸುಲ್ತಾನ, ಔರಂಗಜೇಬ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದು ಜಾಲತಾಣಗಳಲ್ಲಿ ಚರ್ಚೆ ಮತ್ತು ಆಕ್ಷೇಪಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.