ADVERTISEMENT

ಯಾದಗಿರಿ: ಬಸವಸಾಗರ ಜಲಾಶಯದಿಂದ ಎಡದಂಡೆ ಮುಖ್ಯ ಕಾಲುವೆಗೆ ನೀರು

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 11:26 IST
Last Updated 20 ಜುಲೈ 2021, 11:26 IST
ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ್ ನಾಯ್ಕೊಡಿ ಗೇಟ್ಗಳಿಗೆ ಪೂಜೆ.
ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ್ ನಾಯ್ಕೊಡಿ ಗೇಟ್ಗಳಿಗೆ ಪೂಜೆ.   

ಹುಣಸಗಿ (ಯಾದಗಿರಿ): ಕೃಷ್ಣಾ ಅಚ್ಚುಕಟ್ಟು ಪ್ರದೇಶದ ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆಯಿಂದ ಮಂಗಳವಾರದಿಂದ ನೀರು ಹರಿ ಬಿಡಲಾಯಿತು‌.

ಮುಂಗಾರು ಹಂಗಾಮಿನ ಬೆಳೆಗಳಿಗೆ ಜುಲೈ 20 ರಿಂದ ನೀರು ಹರಿಸಲಾಗುತ್ತಿದೆ.

ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ್ ನಾಯ್ಕೊಡಿ ಗೇಟ್ಗಳಿಗೆ ಪೂಜೆ ಸಲ್ಲಿಸಿ ಮಾತನಾಡಿದರು.

'ನದಿ ಪಾತ್ರದಲ್ಲಿರುವ ಗ್ರಾಮಗಳ ಸಾವಿರಾರು ರೈತರ ತ್ಯಾಗದ ಫಲವಾಗಿ ಇಂದು ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಜಿಲ್ಲೆಗಳಿಗೆ ಬೃಹತ್ ನೀರಾವರಿ ಒದಗಿಸಲಾಗುತ್ತದೆ. ರೈತರು ನೀರನ್ನು ಹಿತವಾಗಿ ಮತ್ತು ಮಿತವಾಗಿ ಬಳಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು' ಎಂದು ಹೇಳಿದರು.

ADVERTISEMENT

ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿಜಯಕುಮಾರ್ ಅರಳಿ ಸೇರಿದಂತೆ ಗೇಟ್ನ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.