ADVERTISEMENT

ಬಸವಾದಿ ಶರಣರ ವಚನ ಸಂದೇಶ ಪಾಲಿಸಿ: ಜಗದೀಶ ಶೆಟ್ಟರ್‌

ಸಮಾನತೆಗಾಗಿ ಹೋರಾಡಿದ ಬಸವಣ್ಣ: ಶೆಟ್ಟರ್‌

​ಪ್ರಜಾವಾಣಿ ವಾರ್ತೆ
Published 3 ಮೇ 2022, 5:02 IST
Last Updated 3 ಮೇ 2022, 5:02 IST
ಯಾದಗಿರಿಯಲ್ಲಿ ಸೋಮವಾರ ನಡೆದ ಬಸವ ಜಯಂತಿ ಹಾಗೂ ವಿಶೇಷ ಪ್ರವಚನ ಕಾರ್ಯಕ್ರಮದಲ್ಲಿ ಶಾಸಕ ಜಗದೀಶ ಶೆಟ್ಟರ್‌ ಅವರನ್ನು ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಮತ್ತು ಬಸವ ಜಯಂತ್ಯುತ್ಸವ ಸಮಿತಿಯಿಂದ ಸನ್ಮಾನಿಸಲಾಯಿತು
ಯಾದಗಿರಿಯಲ್ಲಿ ಸೋಮವಾರ ನಡೆದ ಬಸವ ಜಯಂತಿ ಹಾಗೂ ವಿಶೇಷ ಪ್ರವಚನ ಕಾರ್ಯಕ್ರಮದಲ್ಲಿ ಶಾಸಕ ಜಗದೀಶ ಶೆಟ್ಟರ್‌ ಅವರನ್ನು ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಮತ್ತು ಬಸವ ಜಯಂತ್ಯುತ್ಸವ ಸಮಿತಿಯಿಂದ ಸನ್ಮಾನಿಸಲಾಯಿತು   

ಯಾದಗಿರಿ: ಬಸವಣ್ಣನವರ ವಚನ ಹೇಳಿದರೆ ಸಾಲದು, ಅವುಗಳ ಸಂದೇಶವನ್ನು ಪಾಲಿಸಬೇಕು ಎಂದು ಶಾಸಕ ಜಗದೀಶ ಶೆಟ್ಟರ್‌ ಹೇಳಿದರು.

ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಮತ್ತು ಬಸವ ಜಯಂತ್ಯುತ್ಸವ ಸಮಿತಿ ಸಹಯೋಗದಲ್ಲಿ ಇಲ್ಲಿನ ಶರಣಬಸವೇಶ್ವರ ದೇವಸ್ಥಾನ ಆವರಣದಲ್ಲಿ ನಡೆದ ಬಸವ ಜಯಂತಿ ಹಾಗೂ ವಿಶೇಷ ಪ್ರವಚನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂದಿನ ಅನುಭವ ಮಂಟಪವೇ ಈಗಿನ ಸಂಸತ್‌ ಆಗಿದೆ. ಅಲ್ಲಮಪ್ರಭು ನೇತೃತ್ವದ ಅನುಭವ ಮಂಟಪದಲ್ಲಿ ಎಲ್ಲ ಜಾತಿಯವರು ಇದ್ದರು.ಕಾಯಕವೇ ಕೈಲಾಸ, ಎನಗಿಂತ ಕಿರಿಯರಿಲ್ಲ ಎಂದು ಬಸವಣ್ಣ ಅವರು ಹೇಳಿದ್ದಾರೆ. ವಚನ ಸಾಹಿತ್ಯದಲ್ಲಿ ಎಲ್ಲರಿಗೂ ಅರ್ಥವಾಗುವಂತೆ ಬರೆದಿದ್ದಾರೆ ಎಂದರು.

ADVERTISEMENT

ಬಸವಣ್ಣನವರ ಅನುಯಾಯಿ ಆಗಿದ್ದೇನೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಚಾಮರಾಜನಗರಕ್ಕೆ ಮೂರು ಬಾರಿ ತೆರಳಿದ್ದೆ. ಅಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇನೆ. ಮೂಢನಂಬಿಕೆ ಒಂದು ಮಾನಸಿಕತೆ. ಮಾನಸಿಕವಾಗಿ ಗಟ್ಟಿ ಇದ್ದರೆ ಮೂಢನಂಬಿಕೆ ತೊಲಗಲಿದೆ ಎಂದರು.

371 (ಜೆ) ಸರಿಯಾಗಿ ಅನುಷ್ಠಾನ ಆಗಲಿ. ಇದರಿಂದ ಯುವಕರಿಗೆ ಉದ್ಯೋಗ ಸಿಗಲಿ ಎಂದು ಆಶಿಸಿದರು.

ಈ ವೇಳೆ ಇಲಕಲ್‌ನ ವಿಜಯ ಮಹಾಂತೇಶ್ವರ ಮಠದ ಗುರುಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬಾಗಲಕೋಟೆ ಶಿರೂರಿನ ಡಾ. ಬಸವಲಿಂಗ ಸ್ವಾಮೀಜಿ, ಗುರುಮಠಕಲ್ ಖಾಸಾಮಠದ ಗುರು ಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ, ಲಿಂಗಸೂಗೂರಿನ ಸಿದ್ದಲಿಂಗ ಸ್ವಾಮೀಜಿ, ಶರಣಬಸವೇಶ್ವರ ದೇವಸ್ಥಾನದ ನಾಗೇಶ ಸ್ವಾಮೀಜಿ, ರಾಜ್ಯ ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ಮಾಜಿ ಅಧ್ಯಕ್ಷ ಡಾ. ಶಿವಬಸಪ್ಪ ಹೆಸರೂರು, ಅಂತರರಾಷ್ಟ್ರೀಯ ಹಾಸ್ಯ ಕಲಾವಿದ ಬಸವರಾಜ ಮಹಾಮನಿ, ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಮಹೇಶ್ಚಂದ್ರ ವಾಲಿ, ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಂಗಪ್ಪ ಲಾಳಸಂಗಿ, ಸಂಘದ ಕಾರ್ಯದರ್ಶಿ ಗುಂಡಪ್ಪ ಕಲ್ಬುರ್ಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.