ADVERTISEMENT

ವಿದ್ಯಾರ್ಥಿಗಳು ಪ್ರಶ್ನೆ ಮಾಡುವುದು ಕಲಿಯಬೇಕು: ವಿಶ್ವಾರಾಧ್ಯ ಸತ್ಯಂಪೇಟ

​ಪ್ರಜಾವಾಣಿ ವಾರ್ತೆ
Published 23 ಜನವರಿ 2026, 5:14 IST
Last Updated 23 ಜನವರಿ 2026, 5:14 IST
ಶಹಾಪುರ ತಾಲ್ಲೂಕಿನ ಸಗರ ಗ್ರಾಮದ ಸುಬೇದಾರ ಶಿಕ್ಷಣ ಸಂಸ್ಥೆಯಲ್ಲಿ ಗುರುವಾರ ಸಾಹಿತಿ ವಿಶ್ವಾರಾಧ್ಯ ಸತ್ಯಂಪೇಟ ಅವರನ್ನು ಗೌರವಿಸಲಾಯಿತು 
ಶಹಾಪುರ ತಾಲ್ಲೂಕಿನ ಸಗರ ಗ್ರಾಮದ ಸುಬೇದಾರ ಶಿಕ್ಷಣ ಸಂಸ್ಥೆಯಲ್ಲಿ ಗುರುವಾರ ಸಾಹಿತಿ ವಿಶ್ವಾರಾಧ್ಯ ಸತ್ಯಂಪೇಟ ಅವರನ್ನು ಗೌರವಿಸಲಾಯಿತು    

ಶಹಾಪುರ: ‘ವಿಶ್ವಗುರು ಬಸವಣ್ಣನವರು 12ನೇ ಶತಮಾನದಲ್ಲಿ ನಿರ್ಭೀತಿಯಿಂದ ಬದುಕಲು ಕಲಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಮುಂದೆ ಸಾಗಬೇಕು. ವಿದ್ಯಾರ್ಥಿಗಳು ಪ್ರಶ್ನೆ ಮಾಡುವುದನ್ನು ಕಲಿಯಬೇಕು’ ಎಂದು ಶರಣ ಸಾಹಿತಿ ವಿಶ್ವಾರಾಧ್ಯ ಸತ್ಯಂಪೇಟ ತಿಳಿಸಿದರು.

ತಾಲ್ಲೂಕಿನ ಸಗರ ಗ್ರಾಮದಲ್ಲಿ ಸುಬೇದಾರ ಶಿಕ್ಷಣ ಸಂಸ್ಥೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಶಾಲೆಯಿಂದ ಶಾಲೆಗೆ ಸಾಂಸ್ಕೃತಿಕ ನಾಯಕ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಗುರುಗಳಲ್ಲಿ ವಿಶ್ವಾಸವಿಟ್ಟು ವಿದ್ಯೆ ಕಲಿಯಬೇಕು. ಶಿಕ್ಷಣ ಕಣ್ಣ ಮುಂದಿನ ಬೆಳಕು. ಬಸವಾದಿ ಶರಣರ ಚಿಂತನೆಗಳನ್ನು ಅಳವಡಿಸಿಕೊಂಡು ಉತ್ತಮ ನಾಗರಿಕ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಮುಂದಾಗಬೇಕು’ ಎಂದರು.

ADVERTISEMENT

ಸಂಸ್ಥೆಯ ಅಧ್ಯಕ್ಷ ಕರಣ ಸುಬೇದಾರ, ದತ್ತಾತ್ರೇಯ ಕುಲಕರ್ಣಿ, ಶಿವಕುಮಾರ ಅಕ್ಕಿ, ಪ್ರಿಯಾಂಕ ಚವ್ಹಾಣ, ವೇದಾ ನಾಯಕ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.