ADVERTISEMENT

ಬಸವಸಾಗರ ಜಲಾಶಯ: ಮತ್ತೆ ಹೆಚ್ಚಿದ ಒಳ ಹರಿವು:1.12 ಲಕ್ಷ ಕ್ಯೂಸೆಕ್ ನೀರು ನದಿಗೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2025, 12:39 IST
Last Updated 6 ಜುಲೈ 2025, 12:39 IST
   

ಹುಣಸಗಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ಹೆಚ್ಚಾಗುತ್ತಿದ್ದರಿಂದಾಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಮತ್ತೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.

ಕಳೆದ ಮೂರು ದಿನಗಳಿಂದಲೂ ಒಂದು ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿತ್ತು. ಭಾನುವಾರ ಮಧ್ಯಾಹ್ನದ ಬಳಿಕ 1.15 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇದರಿಂದಾಗಿ ಬಸವಸಾಗರ ಜಲಾಶಯದ 30 ಕ್ರಸ್ಟ್‌ಗೇಟ್‌ಗಳ ಮೂಲಕ 1.06 ಲಕ್ಷ ಕ್ಯೂಸೆಕ್ ನೀರನ್ನು ಹಾಗೂ ಮುರುಡೇಶ್ವರ ವಿದ್ಯುತ್ ಉತ್ಪಾದನಾ ಘಟಕದ ಮೂಲಕ 6 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ ಎಂದು ಡ್ಯಾಂ ಡಿವಿಜನ್ ಮೂಲಗಳು ತಿಳಿಸಿವೆ.

ಡ್ಯಾಂಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದ ಹಿನ್ನೆಲೆಯಲ್ಲಿ ನೀರನ್ನು ನದಿಗೆ ಹೆಚ್ಚಿಗೆ ಹರಿಸಲಾಗುತ್ತಿದೆ. ಆದ್ದರಿಂದ ನದಿ ಪಾತ್ರದಲ್ಲಿರುವ ಗ್ರಾಮಗಳ ಜನತೆ ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಸದ್ಯ ಡ್ಯಾಂನಲ್ಲಿ ಶೇ 80.27 ರಷ್ಟು ನೀರಿನ ಸಂಗ್ರಹವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.