ಯಾದಗಿರಿ: ನಗರದ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆಕಚೇರಿ ಕೊಠಡಿಯಲ್ಲಿ ಕಿಡಿಗೇಡಿಗಳು ಬಿಯರ್ ಬಾಟಲ್ ಒಡೆದು ಕಲ್ಲುಗಳನ್ನು ಬಿಸಾಡಿ ಹೋಗಿರುವ ಘಟನೆ ಗುರುವಾರ ಸಂಭವಿಸಿದೆ.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಭೀಮವ್ವ ಅಚ್ಚೋಲಾ ಅವರ ಕಚೇರಿ ಕೊಠಡಿಯಲ್ಲಿ ಕಿಡಿಗೇಡಿಗಳು ಈ ಕೃತ್ಯವೆಸಗಿದ್ದು, ಪ್ರಕರಣ ಸಾಕಷ್ಟು ಅನುಮಾನಗಳಿಗೆ ಇದು ಕಾರಣವಾಗಿದೆ. ಅಧ್ಯಕ್ಷೆ ಭೀಮವ್ವ ಅಚ್ಚೋಲಾ ಮತ್ತು ಸದಸ್ಯರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಕುರಿತು ನಗರ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ನಗರ ಠಾಣೆ ಪೊಲೀಸರು ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.