
ಪ್ರಜಾವಾಣಿ ವಾರ್ತೆ
ಯಾದಗಿರಿ: ಭಾರತ್ ಬಂದ್ ಅಂಗವಾಗಿ ಮಂಗಳವಾರ ನಗರದ ಹೊಸ ಬಸ್ ನಿಲ್ದಾಣ ಬಳಿ ರೈತ, ಕಾರ್ಮಿಕ, ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ.
ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳ ವಿರುದ್ಧ ಕಾರ್ಮಿಕ, ರೈತ ಪರ ಸಂಘಟನೆಗಳ ಪದಾಧಿಕಾರಿಗಳು ಧಿಕ್ಕಾರ ಕೂಗಿದರು.
ನಗರದ ಪ್ರಮುಖ ವೃತ್ತಗಳ ಸಮೀಪ ಎಂದಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ. ಹೂ, ಹಣ್ಣು, ತಳ್ಳುಗಾಡಿಗಳಲ್ಲಿ ವ್ಯಾಪಾರ ನಡೆಯುತ್ತಿದೆ. ಅಂಗಡಿ ಮುಗ್ಗಟ್ಟುಗಳು ತೆಗೆದಿವೆ. ಆಟೊ, ಬಸ್ ಸಂಚಾರ ವ್ಯತ್ಯಯವಾಗಿಲ್ಲ.
ಪ್ರತಿಭಟನೆಯಲ್ಲಿ ಆರ್ ಕೆಎಸ್, ಎಐಡಿಎಸ್ಒ, ಎಐಯುಟಿಯುಸಿ ಸೇರಿದಂತೆ ಕಾರ್ಮಿಕ, ರೈತ ಸಂಘಟನೆಗಳು ಭಾಗವಹಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.