ADVERTISEMENT

ಭುವನೇಶ್ವರಿ ದೇವಿ ಸ್ತಬ್ದ ಚಿತ್ರ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2022, 14:35 IST
Last Updated 1 ನವೆಂಬರ್ 2022, 14:35 IST
ಯಾದಗಿರಿಯಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರ ಮತ್ತು ವಿವಿಧ ಇಲಾಖೆಗಳ ಸ್ಥಬ್ತ ಚಿತ್ರ ಮೆರವಣಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್, ಚಾಲನೆ ನೀಡಿದರು
ಯಾದಗಿರಿಯಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರ ಮತ್ತು ವಿವಿಧ ಇಲಾಖೆಗಳ ಸ್ಥಬ್ತ ಚಿತ್ರ ಮೆರವಣಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್, ಚಾಲನೆ ನೀಡಿದರು   

ಯಾದಗಿರಿ: ಕನ್ನಡ ರಾಜ್ಯೋತ್ಸವ ಅಂಗವಾಗಿ ನಗರದ ಮೈಲಾಪುರ ಅಗಸಿಯಲ್ಲಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜಾ ನೆರವೇರಿಸಿ ವಿವಿಧ ಇಲಾಖೆಗಳ ಸ್ತಬ್ದ ಚಿತ್ರ ಮೆರವಣಿಗೆಗೆ ಚಾಲನೆ ನೀಡಲಾಯಿತು. ಮೆರವಣಿಗೆ ಮೈಲಾಪುರ ಅಗಸಿಯಿಂದ ಚಕ್ಕರಕಟ್ಟ, ಗಾಂಧಿಚೌಕ್, ನಗರಸಭೆ ಮಾರ್ಗವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸ್ವಪ್ನಾ ಗ್ರೌಂಡ್ ವರೆಗೆ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರುದ್ರಗೌಡ ಪಾಟೀಲ, ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ, ಜಿಲ್ಲಾಧಿಕಾರಿ ಸ್ನೇಹಲ್ ಆರ್, ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಉಪವಿಭಾಗಾಧಿಕಾರಿ ಶಾ ಆಲಂ, ನಗರಸಭೆ ಪೌರಾಯುಕ್ತ ಶರಣಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT