ADVERTISEMENT

ವಿಷ ಸೇವಿಸಿ ಬಿಲ್‌ಕಲೆಕ್ಟರ್‌ ಆತ್ಮಹತ್ಯೆಗೆ ಯತ್ನ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2024, 16:24 IST
Last Updated 21 ಆಗಸ್ಟ್ 2024, 16:24 IST
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಿಲ್ ಕಲೆಕ್ಟರ್ ಯಲ್ಲಪ್ಪ ಅರಳಗುಂಡಗಿ ಅವರಿಗೆ ಸುರಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಿಲ್ ಕಲೆಕ್ಟರ್ ಯಲ್ಲಪ್ಪ ಅರಳಗುಂಡಗಿ ಅವರಿಗೆ ಸುರಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು   

ಸುರಪುರ: ತಾಲ್ಲೂಕಿನ ದೇವಪುರ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಯಲ್ಲಪ್ಪ ಅರಳಗುಂಡಗಿ ಬುಧವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ದೇವಪುರ ಶೆಳ್ಳಗಿ ಮಾರ್ಗ ಮಧ್ಯೆದಲ್ಲಿ ವಿಷ ಸೇವಿಸಿ ಒದ್ದಾಡುತ್ತಿದ್ದ ಅವರನ್ನು ದಾರಿಹೋಕರು ಆಸ್ಪತ್ರೆಗೆ ಸೇರಿಸಿದ್ದಾರೆ.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಅಧ್ಯಕ್ಷರು ತನ್ನಿಂದ ₹ 1.50 ಲಕ್ಷ ವೆಚ್ಚದ ವಿವಿಧ ಕಾಮಗಾರಿ ಮಾಡಿಸಿ ಹಣ ನೀಡದೆ ಸತಾಯಿಸುತ್ತಿದ್ದಾರೆ. ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದೆ ಎಂದು ಯಲ್ಲಪ್ಪ ಆಸ್ಪತ್ರೆಗೆ ಭೇಟಿ ನೀಡಿದ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.

ADVERTISEMENT

ಸುರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಲ್ಲಪ್ಪ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.