ADVERTISEMENT

ಜ.12ಕ್ಕೆ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರಿಗೆ ಸನ್ಮಾನ

ಜನ ಸೇವಕ ಅಡಿಯಲ್ಲಿ ಕಾರ್ಯಕ್ರಮ ಆಯೋಜನೆ: ಡಾ.ನಾಯ್ಕಲ್‌

​ಪ್ರಜಾವಾಣಿ ವಾರ್ತೆ
Published 8 ಜನವರಿ 2021, 16:33 IST
Last Updated 8 ಜನವರಿ 2021, 16:33 IST
ಡಾ.ಶರಣಭೂಪಾಲರೆಡ್ಡಿ ನಾಯ್ಕಲ್
ಡಾ.ಶರಣಭೂಪಾಲರೆಡ್ಡಿ ನಾಯ್ಕಲ್   

ಯಾದಗಿರಿ: ‘ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬೆಂಬಲಿಗರು ಅಭೂತಪೂರ್ವ ಗೆಲುವು ಸಾಧಿಸಿದ್ದು, ಅವರಿಗೆ ಜ.12ರಂದು ಸನ್ಮಾನ ಏರ್ಪಡಿಸಲಾಗಿದೆ’ ಎಂದು ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಡಾ.ಶರಣಭೂಪಾಲರೆಡ್ಡಿ ನಾಯ್ಕಲ್ ಹೇಳಿದರು.

‘ಜನ ಸೇವಕ ಅಡಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಕಾರ್ಯಕ್ರಮಕ್ಕೆ ಗ್ರಾಮ, ತಾಲ್ಲೂಕು, ಜಿಲ್ಲಾ ಪಂಚಾಯಿತಿ ಸದಸ್ಯರು, ಶಾಸಕರು, ವಿಧಾನ ಪರಿಷತ್, ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ’ ಎಂದು ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಜಿಲ್ಲೆಯಲ್ಲಿ ಶೇ 55ರಷ್ಟು ಬಿಜೆಪಿ ಬೆಂಬಲಿಗರು ಆಯ್ಕೆಯಾಗಿದ್ದಾರೆ. ಕಳೆದ 2015ಕ್ಕಿಂತ ಹೆಚ್ಚು ಸದಸ್ಯರು ಈ ಬಾರಿ ಆಯ್ಕೆಯಾಗಿದ್ದಾರೆ. ಹೀಗಾಗಿ ಇವರನ್ನು ಸನ್ಮಾಸಲಾಗುವುದು’ ಎಂದರು.

ADVERTISEMENT

ಜಿಲ್ಲಾ ಪಂಚಾಯಿತಿಗೆ ಅಣಿ:

‘ಮುಂಬರುವ ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಅಣಿಯಾಗಲು ಈ ಕಾರ್ಯಕ್ರಮ ವೇದಿಕೆಯಾಗಲಿದೆ. ಈ ಮೂಲಕ ಪಕ್ಷವನ್ನು ಕಟ್ಟಲು ಕಾರ್ಯಕರ್ತರಿಗೆ ಕರೆ ನೀಡಲಾಗುವುದು’ ಎಂದು ತಿಳಿಸಿದರು.

‘ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಕಿಕಲಾ ಜೊಲ್ಲೆ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಉಪಾಧ್ಯಕ್ಷ ಮಾಲೀಕಯ್ಯ ಗುತ್ತೆದಾರ, ರಾಜ್ಯ ಯುವ ಘಟಕದ ಅಧ್ಯಕ್ಷ ಸಂದೀಪ ಕುಮಾರ, ಮಹೇಶ ತೆಂಗಿನಕಾಯಿ ಸೇರಿದಂತೆ ವಿವಿಧ ಮಂಡಲ, ಮೋರ್ಚಾ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ಮಾಜಿ ಶಾಸಕ ಡಾ.ವೀರಬಸವಂತರಡ್ಡಿ ಮುದ್ನಾಳ, ಪ್ರಧಾನ ಕಾರ್ಯದರ್ಶಿ ವೆಂಕಟರೆಡ್ಡಿ ಅಬ್ಬೆತುಮಕೂರು, ಯೂಡ ಅಧ್ಯಕ್ಷ ಬಸವರಾಜ ಚಂಡರಕಿ, ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ, ಉಪಾಧ್ಯಕ್ಷ ಪ್ರಭಾವತಿ ಮಾರುತಿ ಕಲಾಲ್, ನಗರಸಭೆ ಸದಸ್ಯರಾದ ಸುರೇಶ ಅಂಬಿಗೇರ, ಲಲಿತಾ ಅನಪುರ, ನಾಗರತ್ನ ಕುಪ್ಪಿ, ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.