ADVERTISEMENT

ಗಾಳಿಯಲ್ಲಿ ಗುಂಡು ಹಾರಿಸಿ ಕೇಂದ್ರ ಸಚಿವ ಭಗವಂತ ಖೂಬಾಗೆ ಸ್ವಾಗತ, ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2021, 10:38 IST
Last Updated 18 ಆಗಸ್ಟ್ 2021, 10:38 IST
ಯರಗೋಳದಲ್ಲಿ ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ದೃಶ್ಯ
ಯರಗೋಳದಲ್ಲಿ ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ದೃಶ್ಯ   

ಯಾದಗಿರಿ: ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸುವ ಸಂದರ್ಭ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ವಿವಾದಕ್ಕೆ ಕಾರಣವಾಗಿದೆ.ಬಿಜೆಪಿ ಜನಾರ್ಶೀವಾದ ಯಾತ್ರೆ ಅಂಗವಾಗಿ‌ ಸಚಿವರು ಜಿಲ್ಲೆಗೆ ಪ್ರವೇಶಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಜಿಲ್ಲೆಯ ಗಡಿ ಗ್ರಾಮ ಯರಗೋಳದಲ್ಲಿಸಚಿವರನ್ನು ಮೆರವಣಿಗೆ ಮೂಲಕ ಭರ್ಜರಿಯಾಗಿ ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ಸಿದ್ಧತೆ ನಡೆಸಿದ್ದರು.ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದಘಟನೆ ನಡೆದಿದೆ. ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ವಿಡಿಯೊ ಸಾಮಾಜಿಕ ತಾಣಗಳಲ್ಲಿ ಓಡಾಡುತ್ತಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.