ADVERTISEMENT

ಎಸ್‌ಪಿ ಕಚೇರಿಯಲ್ಲಿ 57 ಜನರಿಂದ ರಕ್ತದಾನ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2021, 16:35 IST
Last Updated 21 ಸೆಪ್ಟೆಂಬರ್ 2021, 16:35 IST
ಯಾದಗಿರಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ರಕ್ತದಾನ ಮಾಡಿದರು
ಯಾದಗಿರಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ರಕ್ತದಾನ ಮಾಡಿದರು   

ಯಾದಗಿರಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ಅವರ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಂಗಳವಾರ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಶಿಬಿರದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, ಆಟೊ ಚಾಲಕರು ಮತ್ತು ವರ್ತಕರು ಸೇರಿ ಒಟ್ಟು 57 ಜನ ರಕ್ತದಾನ ಮಾಡಿದರು.

ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಡಾ.ಶರಣಭೂಪಾಲರೆಡ್ಡಿ ಮತ್ತು ಡಾ.ಶಾಲಿನಿ ಅವರ ತಂಡ ರಕ್ತ ನಿಧಿ ಸಂಗ್ರಹ ಮಾಡಲಾಯಿತು.

ADVERTISEMENT

ಈ ವೇಳೆ ಸಿ.ಬಿ.ವೇದಮೂರ್ತಿ ಅವರು ಮಾತನಾಡಿ, ಪ್ರತಿ ನಾಲ್ಕು ತಿಂಗಳಿಗೊಮ್ಮೆ ಹೊಸ ರಕ್ತ ಉತ್ಪತ್ತಿಯಾಗುತ್ತದೆ. ಹೀಗಾಗಿ ರಕ್ತದಾನ ಮಾಡಬೇಕು. ಈ ಮೂಲಕ ಮತ್ತೊಬ್ಬರ ಜೀವಕ್ಕೆ ಬೇಕಾಗುವ ರಕ್ತವನ್ನು ನೀಡಿದಂತೆ ಆಗುತ್ತದೆ. ಇದು ಶ್ರೇಷ್ಠವಾಗಿರುವ ಕಾರ್ಯವಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.