
ಪ್ರಜಾವಾಣಿ ವಾರ್ತೆ
ಕೆಂಭಾವಿ ಸಮೀಪ ಯಾಳಗಿ-ನಾಗರಹಳ್ಳಿ ರಸ್ತೆಯಲ್ಲಿ ಸೋಮವಾರ ನಿಯಂತ್ರಣ ತಪ್ಪಿ ಬೊಲೆರೊ ರಸ್ತೆ ಬದಿಯ ಕಾಲುವೆಗೆ ಬಿದ್ದಿದೆ
ಕೆಂಭಾವಿ: ಯಾಳಗಿ-ನಾಗರಹಳ್ಳಿ ರಸ್ತೆಯಲ್ಲಿ ಸೋಮವಾರ ಬೊಲೆರೊ ಪಿಕ್‍ಅಪ್ ರಸ್ತೆ ಬದಿಯ ಕಾಲುವೆಗೆ ಉರುಳಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ದುರ್ಗಾಪ್ರಸಾದ (20) ಮೃತಪಟ್ಟವರು. ಗೋವಿಂದರಾಯ ಎಂಬುವರಿಗೆ ಗಂಭೀರ ಗಾಯವಾಗಿದ್ದು, ರಾಯಚೂರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಂಧ್ರ ಪ್ರದೇಶದ ಗುತ್ತಿ ಗ್ರಾಮದಿಂದ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣಕ್ಕೆ ಎಮ್ಮಿ ಖರೀದಿಗೆಂದು ಬೊಲೆರೊ ವಾಹನದಲ್ಲಿ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಘಟನೆ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.