ಶಹಾಪುರ (ಯಾದಗಿರಿ): ತಾಲ್ಲೂಕಿನ ಹುಲಕಲ್ ಗ್ರಾಮದ ಬಳಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಸ್ಸಿನಲ್ಲಿದ್ದ 12 ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ನುಜ್ಜುಗುಜ್ಜಾಗಿದೆ.
ಗಾಯಗೊಂಡವರನ್ನು ಕಲಬುರ್ಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಸರು ತಿಳಿದು ಬಂದಿಲ್ಲ.ಶಹಾಪುರದಿಂದ ಕಲಬುರ್ಗಿಗೆ ತೆರಳುತ್ತಿದ್ದ ಸಾರಿಗೆ ಬಸ್ ಮತ್ತು ಲಾರಿ ಪರಸ್ಪರ ಡಿಕ್ಕಿಯಾಗಿ ಪ್ರಯಾಣಿಕರುಗಾಯಗೊಂಡಿದ್ದಾರೆ.ಭೀಮರಾಯನಗುಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಭೀಗುಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.