ADVERTISEMENT

ಬಸ್ ಸಂಚಾರ ಆರಂಭಿಸಲು ಮನವಿ

ಬಿಜೆಪಿ ರೈತ ಮೋರ್ಚಾದಿಂದ ಒತ್ತಾಯ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2022, 5:54 IST
Last Updated 18 ಆಗಸ್ಟ್ 2022, 5:54 IST
ಯಾದಗಿರಿ ಮತಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಲ್ಲಿ ಬಸ್‌ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿ ಭಾರತೀಯ ಜನತಾ ಪಾರ್ಟಿಯ ರಾಜ್ಯ ರೈತ ಮೋರ್ಚಾದಿಂದ ಕೆಕೆಆರ್‌ಟಿಸಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು
ಯಾದಗಿರಿ ಮತಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಲ್ಲಿ ಬಸ್‌ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿ ಭಾರತೀಯ ಜನತಾ ಪಾರ್ಟಿಯ ರಾಜ್ಯ ರೈತ ಮೋರ್ಚಾದಿಂದ ಕೆಕೆಆರ್‌ಟಿಸಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು   

ಯಾದಗಿರಿ: ಯಾದಗಿರಿ ಮತಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ಬಸ್‌ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ರೈತ ಮೋರ್ಚಾದಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದರೈತ ಮೋರ್ಚಾ ಕಾರ್ಯದರ್ಶಿ ಚಂದ್ರಖೇರಗೌಡ ಮಾಗನೂರ, ಮತಕ್ಷೇತ್ರದ ಹಳ್ಳಿಗಳಾದಕರಣಗಿ, ಚಟ್ನಳ್ಳಿ, ನಾಲ್ವಡಗಿ, ಮರಮಕಲ್, ಬಲಕಲ್ ಗ್ರಾಮಗಳಿಗೆ ಬಸ್ ಸೌಕರ್ಯ ಒದಗಿಸಬೇಕು. ಸುಮಾರು ಎರಡು ವರ್ಷದಿಂದ ಬಸ್ ಸಂಚಾರ ಸ್ಥಗಿತವಾಗಿದ್ದು ಜನರಿಗೆ ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಬಸ್ ಸಂಚಾರ ಪ್ರಾರಂಭಿಸುವ ಮೂಲಕ ಈ ಭಾಗದ ಜನರಿಗೆ ಅನುಕೂಲ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಪ್ರತಿದಿನ ವಿದ್ಯಾರ್ಥಿಗಳು ಶಾಲೆಗಳಿಗೆ ಹೋಗಲು ದಾರಿ ನಡೆದುಕೊಂಡು ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ಆರಂಭವಾದರೆ ಈ ಭಾಗದ ರೈತರಿಗೆ ಸಾರ್ವಜನಿಕರಿಗೆ ಅನುಕೂಲವಾಗಿದ್ದು, ಶೀಘ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ADVERTISEMENT

ನಂತರವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಪಿ.ಹರಿಬಾಬುಗೆ ಮನವಿ ಸಲ್ಲಿಸಲಾಯಿತು.

ಬಿಜೆಪಿ ಮುಖಂಡರಾದ ಲಲಿತಾ ಅನಪುರ, ರವಿಗೌಡ ಮಾಲಿಪಾಟೀಲ, ವಿರೂಪಾಕ್ಷಿ, ಮೃತುಜ್ಯ, ಶರಣಗೌಡ, ಶಿವುರೆಡ್ಡಿ, ಹಣಮಂತ ಬಂದಳ್ಳಿ, ಯಂಕಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.