ಯಾದಗಿರಿ: ‘ಅಧಿಕೃತ ಮಾರಾಟಗಾರರಿಂದ ಮಾತ್ರ ರೈತರು ಹತ್ತಿ ಬೀಜಗಳನ್ನು ಖರೀದಿ ಮಾಡಬೇಕು. ಹೊರ ರಾಜ್ಯಗಳಿಂದ ಯಾವುದೇ ಕಾರಣಕ್ಕೂ ಹತ್ತಿ ಬೀಜ ಖರೀದಿ ಮಾಡಬಾರದು’ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಭೀಮಣ್ಣ ಮೇಟಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಕೃಷಿ ಇಲಾಖೆಯು ಗಡಿಭಾಗದಲ್ಲಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಾಣ ಮಾಡಬೇಕು. ಕಳೆದ ವರ್ಷ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಂದ ನಕಲಿ ಹತ್ತಿ ಬೀಜ ಸರಬರಾಜು ಮಾಡಲಾಗುತ್ತದೆ. ಈ ವರ್ಷ ಕೃಷಿ ಇಲಾಖೆ ಅಧಿಕಾರಿಗಳು ಬಹಳ ಎಚ್ಚರಿಕೆ ವಹಿಸಬೇಕು’ ಎಂದು ತಿಳಿಸಿದ್ದಾರೆ.
ರೈತರು ಯಾವುದೇ ಕಾರಣಕ್ಕೂ ಹೊರ ರಾಜ್ಯಗಳಿಂದ ಹತ್ತಿ ಬೀಜಗಳನ್ನು ಖರೀದಿ ಮಾಡಬಾರದು. ಮೋಸಕ್ಕೆ ಒಳಗಾಗಬಾರದು. ನಕಲಿ ಹತ್ತಿ ಬೀಜಗಳನ್ನು ಮಾರಾಟ ಮಾಡುವವರ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ಕಾನೂನು ಮೂಲಕ ಅವರ ಮೇಲೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.