ADVERTISEMENT

ಜಮೀನುಗಳಿಗೆ ನುಗ್ಗಿದ ಕಾಲುವೆ ನೀರು

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2020, 16:01 IST
Last Updated 1 ಸೆಪ್ಟೆಂಬರ್ 2020, 16:01 IST
ವಡಗೇರಾ ತಾಲ್ಲೂಕಿನ ಯಕ್ಷಿಂತಿ ಗ್ರಾಮದಲ್ಲಿ ಕಾಲುವೆ ಒಡೆದು ಜಮೀನಿಗೆ ನೀರು ನುಗ್ಗಿದೆ
ವಡಗೇರಾ ತಾಲ್ಲೂಕಿನ ಯಕ್ಷಿಂತಿ ಗ್ರಾಮದಲ್ಲಿ ಕಾಲುವೆ ಒಡೆದು ಜಮೀನಿಗೆ ನೀರು ನುಗ್ಗಿದೆ   

ವಡಗೇರಾ: ತಾಲ್ಲೂಕಿನ ಯಕ್ಷಿಂತಿ ಗ್ರಾಮದಲ್ಲಿ ಪ್ರತಿ ವರ್ಷ ಪ್ರವಾಹ ಮತ್ತು ಮಳೆಯಿಂದ ಮುಂಗಾರು ಬೆಳೆ ನಾಶವಾದರೆ; ಈ ವರ್ಷ ಕಾಲುವೆ ಒಡೆದು ರೈತರ ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳು ಹಾಳಾಗಿವೆ.

‘ಅತಿಯಾದ ಮಳೆಯಿಂದಾಗಿ ಹೊಲಗಳಲ್ಲಿ ಈಗಾಗಲೇ ತೇವಾಂಶ ಹೆಚ್ಚಾಗಿದೆ. ಇದರಿಂದ ಬೆಳೆಗಳು ಕೊಳೆಯುತ್ತಿವೆ. ಇಂತಹ ಸಂದರ್ಭದಲ್ಲಿ ಈಗ ಕಾಲುವೆ ನೀರಿನಿಂದ ನಮ್ಮ ಬೆಳೆಗಳು ಸಂಪೂರ್ಣ ಹಾಳಾಗಿವೆ. ಸಾಲ ಮಾಡಿ ಬಿತ್ತಿದ ಬೀಜ ಕೂಡ ಮಣ್ಣಿನ ಪಾಲಾಗಿದೆ’ ಎನ್ನುತ್ತಾರೆ ರೈತರು.

‘ಜಮೀನುಗಳಿಗೆ ಒಂದು ತಿಂಗಳಿನಿಂದ ಕಾಲುವೆ ನೀರು ನುಗ್ಗಿ ಹತ್ತಿ, ತೊಗರಿ ಬೆಳೆಗಳು ಸಂಪೂರ್ಣ ಹಾಳಾಗಿವೆ. ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಹೊಲಗಳಿಗೆ ಭೇಟಿ ನೀಡಿ, ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಕೊಡಬೇಕು’ ಎಂದು ರೈತರಾದ ದೇವಪ್ಪ, ನಾಗಪ್ಪ ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.