ಯಾದಗಿರಿ: ಅಬ್ಬೆತುಮಕೂರಿನ ವಿಶ್ವಾರಾಧ್ಯರ ‘ಪರಂಪರಾ ಪಾದಯಾತ್ರೆ’ ಈ ವರ್ಷ ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವುದರಿಂದ ನಡೆಯುವುದಿಲ್ಲ ಎಂದು ಶ್ರೀಮಠದ ವಕ್ತಾರ ಡಾ.ಸುಭಾಶ್ಚಂದ್ರ ಕೌಲಗಿ ತಿಳಿಸಿದ್ದಾರೆ.
ಪೀಠಾಧಿಪತಿ ಡಾ.ಗಂಗಾಧರ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿ ವರ್ಷ ನಾಗರ ಅಮಾವಾಸ್ಯೆಯ ಎರಡು ದಿನ ಮುಂಚೆ ಪ್ರಾರಂಭಿಸುತ್ತಿದ್ದ ಪರಂಪರಾ ಪಾದಯಾತ್ರೆ ನಿರಂತರ ಮೂರು ದಿನಗಳ ಕಾಲ ನಡೆಯುತ್ತಿತ್ತು. ಶ್ರೀಮಠದ ಭಕ್ತರು ಹೊರ ಹೋಗುವ ಸಂದರ್ಭದಲ್ಲಿ ಮಾಸ್ಕ್ ಧರಿಸಿಕೊಳ್ಳಬೇಕು, ಅಂತರ ಪಾಲಿಸಬೇಕು. ಕೊರೊನಾ ತಡೆಗಟ್ಟಲು ಎಲ್ಲರೂ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.