ವಡಗೇರಾ: ತಾಲ್ಲೂಕಿನ ಹಾಲಗೇರಾ ಗ್ರಾಮದ ಅನತಿ ದೂರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಪಕ್ಕದ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಕಾರಿನಲ್ಲಿ ಇದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಘಟನೆಯ ವಿವಿರ: ರಾಯಚೂರು ಜಿಲ್ಲೆ ಗಬ್ಬೂರದಿಂದ ಅಜ್ಜಿ, ತಾಯಿ ಹಾಗೂ ಇಬ್ಬರು ಚಿಕ್ಕ ಮಕ್ಕಳು ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಬೀಗರ ಮನೆಯಲ್ಲಿ ನಡೆಯುತಿದ್ದ ತೊಟ್ಟಿಲು ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಡಿಗೆ ಕಾರಿನಲ್ಲಿ ಹೊರಟಿದ್ದರು. ಹಾಲಗೇರಾ ಗ್ರಾಮದ ಅನತಿ ದೂರದಲ್ಲಿ ಕಾರು ಚಾಲಕ ತನ್ನ ತೊಡೆಯ ಮೇಲೆ ಮಲಗಿದ್ದ ಪುಟ್ಟ ಬಾಲಕನನ್ನು ಪಕ್ಕಕ್ಕೆ ಸರಿಸಲು ಹೋದಾಗ ಕಾರು ನಿಯಂತ್ರಣ ತಪ್ಪಿ ಸುಮಾರು 50 ಮೀಟರ್‌ವರೆಗೆ ರಸ್ತೆ ಬದಿಯಲ್ಲಿ ಚಲಿಸಿ ನಂತರ ಉರುಳಿ ಬಿದ್ದಿದೆ.
ಘಟನಾ ಸ್ಥಳಕ್ಕೆ ಸ್ಥಳೀಯರು ಬಂದು ಕಾರಿನಲ್ಲಿ ಇದ್ದ ಎಲ್ಲರನ್ನೂ ಹೊರಗಡೆ ತಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.