ADVERTISEMENT

22 ಜನರ ವಿರುದ್ಧ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 8 ಮೇ 2025, 15:31 IST
Last Updated 8 ಮೇ 2025, 15:31 IST

ಹುಣಸಗಿ: ತಾಲ್ಲೂಕಿನ ನಾರಾಯಣಪುರ ಠಾಣೆಯ ಎದುರು ಏ.26ರಂದು ಶವವಿಟ್ಟು ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 22 ಜನರ ವಿರುದ್ಧ ನಾರಾಯಣಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲ್ಲೂಕಿನ ಜೋಗುಂಡಬಾವಿ ಗ್ರಾಮದ ಮೃತ ಗೌಡಪ್ಪ ಚವನಬಾವಿ ಅವರ ಮನೆಯವರು ಮಾಡಿದ ಅಪರಾಧ ಮರೆಮಾಚಿ ಪೊಲಿಸರನ್ನು ದಿಕ್ಕು ತಪ್ಪಿಸಿ, ಠಾಣೆಯ ಎದುರು ಶವವಿಟ್ಟು ಪ್ರತಿಭಟನೆ ನಡಿಸಿದ್ದರು. ಅಲ್ಲದೇ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು ಎಂದು ದೂರಿನಲ್ಲಿ ದಾಖಲಾಗಿದೆ.

ಹಿನ್ನೆಲೆ: ಕೆಲ ದಿನಗಳ ಹಿಂದೆ ಜಮೀನು ಮತ್ತು ಬದುವಿನ ವಿಷಯಕ್ಕೆ ಸಂಬಂಧಿಸಿ, ಸಂಬಂಧಿಕರ ನಡುವೆ ನಡೆದಿದ್ದ ಜಗಳದಲ್ಲಿ ಗೌಡಪ್ಪ ಚವನಬಾವಿಗೆ ತಲೆಗೆ ಪೆಟ್ಟು ಬಿದ್ದು ಮೃತಪಟ್ಟಿದ್ದರು. ಬಳಿಕ ಸಂಬಂಧಿಗಳು ಪೊಲೀಸ್‌ ಠಾಣೆಗೆ ದೂರು ನೀಡಲು ಯತ್ನಿಸಿದ್ದರು. ಆದರೆ ಪೊಲೀಸರು ದೂರು ದಾಖಲಿಸಿಕೊಂಡಿರಲಿಲ್ಲ. ಇದನ್ನು ಖಂಡಿಸಿ ಠಾಣೆ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.