
ಪ್ರಜಾವಾಣಿ ವಾರ್ತೆ
ಯಾದಗಿರಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ಆರೋಪದಡಿ ನಗರದ ಅಬ್ದುಲ್‌ನಬಿ ಜಾಕೀರ್ ವಿರುದ್ಧ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾನ್‌ಸ್ಟೆಬಲ್ ರವಿ ರಾಠೋಡ್ ಅವರು ಈ ಪೋಸ್ಟ್ ಗಮನಿಸಿದ್ದರು. ‘ವಿವಿಧ ಸಮುದಾಯಗಳ ನಡುವೆ ದ್ವೇಷ ಉಂಟುಮಾಡಿ, ಸೌಹಾರ್ದಕ್ಕೆ ಧಕ್ಕೆ ತರುವ ಕೃತ್ಯವನ್ನು ಆರೋಪಿ ಎಸಗಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.