ಶಹಾಪುರ: ತಾಲ್ಲೂಕಿನ ಗೋಗಿ(ಪಿ) ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಬುಧವಾರ ತಹಶೀಲ್ದಾರ್ ಕಚೇರಿಯಲ್ಲಿ ಮತ ಎಣಿಕೆ ಕಾರ್ಯ ನಡೆಯಿತು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ತಿಳಿಸಿದ್ದಾರೆ.
ಮುಡಬೂಳ ಗ್ರಾಪಂ ಒಂದು ಸ್ಥಾನಕ್ಕೆ ಚುನಾವಣೆ ನಡೆದಿತ್ತು. ವಾರ್ಡ್ ನಂಬರ್ 1 ಹಿಂದುಳಿದ ವರ್ಗ (ಅ) ಮಹಿಳೆ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಿದ್ದಮ್ಮ ಮಾಳಪ್ಪ ಆಯ್ಕೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.