ADVERTISEMENT

ಹುಣಸಗಿ | ಚದುರಂಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2025, 6:35 IST
Last Updated 17 ಸೆಪ್ಟೆಂಬರ್ 2025, 6:35 IST
ಹುಣಸಗಿ ತಾಲ್ಲೂಕಿನ ವಜ್ಜಲ ಆದರ್ಶ ಶಾಲೆಯ ವಿದ್ಯಾರ್ಥಿಗಳು ಚದುರಂಗ ಆಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ 
ಹುಣಸಗಿ ತಾಲ್ಲೂಕಿನ ವಜ್ಜಲ ಆದರ್ಶ ಶಾಲೆಯ ವಿದ್ಯಾರ್ಥಿಗಳು ಚದುರಂಗ ಆಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ    

ಹುಣಸಗಿ: ತಾಲ್ಲೂಕಿನ ವಜ್ಜಲ ಗ್ರಾಮದಲ್ಲಿ ಆರ್.ಎಂ.ಎಸ್‌ಎ ಅಡಿಯಲ್ಲಿ ನಡೆಯುತ್ತಿರುವ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳಾದ ಅಭಯಚಂದ್ರ ರಮೇಶ ಹಾಗೂ ಅನಿತಾ ಬ್ರಹ್ಮಯ್ಯ ಚದುರಂಗ ಆಟದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಯಾದಗಿರಿಯಲ್ಲಿ ನಡೆದ 14 ವರ್ಷ ವಯೋಮಾನದ ಒಳಗಿನ ಮಕ್ಕಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾಗಿದ್ದಾರೆ. ಮಕ್ಕಳ ಸಾಧನೆಗೆ ಎಸ್‌ಡಿಎಂಸಿ ಅಧ್ಯಕ್ಷ ಗುರಣ್ಣ ಕ್ವಾಟಿ, ಶಾಲೆಯ ಹಿರಿಯ ಶಿಕ್ಷಕ ಎಸ್.ಎಸ್.ಬಾಕಲಿ, ದೈಹಿಕ ಶಿಕ್ಷಣ ಶಿಕ್ಷಕ ಎಚ್.ಬಿ.ಕರೆಕಲ್ಲ, ಹಾಗೂ ಗ್ರಾಮದ ಪ್ರಮುಖರು, ಎಸ್‌ಡಿಎಂಸಿ ಸದಸ್ಯರು ಹರ್ಷ ವ್ಯಕ್ತಪಡಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT