ADVERTISEMENT

ಫೆ.19 ರಂದು ಛತ್ರಪತಿ ಶಿವಾಜಿ ಜಯಂತಿ

ಹೆಚ್ಚುವರಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2020, 10:10 IST
Last Updated 11 ಫೆಬ್ರುವರಿ 2020, 10:10 IST
ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ಅಧ್ಯಕ್ಷತೆಯಲ್ಲಿ ಈಚೆಗೆ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಪೂರ್ವಸಿದ್ಧತಾ ಸಭೆ ಜರುಗಿತು
ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ಅಧ್ಯಕ್ಷತೆಯಲ್ಲಿ ಈಚೆಗೆ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಪೂರ್ವಸಿದ್ಧತಾ ಸಭೆ ಜರುಗಿತು   

ಯಾದಗಿರಿ: ಜಿಲ್ಲಾಡಳಿತದ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವವನ್ನು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಫೆ.19ರಂದು ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಪೂರ್ವಸಿದ್ಧತಾ ಸಭೆಯಲ್ಲಿಮಾತನಾಡಿದರು.

ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ಛತ್ರಪತಿ ಶಿವಾಜಿ ಮಹಾರಾಜ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು. ತಾಲ್ಲೂಕು ಮಟ್ಟದಲ್ಲಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು ಎಂದು ಸೂಚಿಸಿದರು.

ADVERTISEMENT

ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಘುವೀರ ಸಿಂಗ್ ಠಾಕೂರ ಸಭೆಯ ನಡಾವಳಿ ಓದಿದರು. ಸಿಪಿಐ ಎಸ್.ಎಂ.ನ್ಯಾಮಣ್ಣವರ, ಅಬಕಾರಿ ನಿರೀಕ್ಷಕ ಶ್ರೀರಾಮ ರಾಠೋಡ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೆ.ವಿಶ್ವನಾಥ, ಆಹಾರ ಇಲಾಖೆಯ ಶಾಂತಾಬಾಯಿ ಪಾಲಕಿ, ಕಾರ್ಮಿಕ ಇಲಾಖೆಯ ಲಕ್ಷ್ಮಣ ಪೂಜಾರ, ನಗರಸಭೆ ಮಾಜಿ ಸದಸ್ಯರಾದ ನಾರಾಯಣರಾವ ಚವ್ಹಾಣ, ಸಮಾಜದ ಮುಖಂಡರಾದ ಪರಶುರಾಮ ಶೇಗುರಕರ, ಜಿತೇಂದ್ರ ಬಿ.ನವಗ್ರೆ, ವೆಂಕಟೇಶ ಭೀಮನಹಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.