ಕೆಂಭಾವಿ: ಸಮೀಪ ಯಡಿಯಾಪುರ ಗ್ರಾಮದಲ್ಲಿ ಟಾಟಾ ಏಸ್ ವಾಹನ ಹರಿದು ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಜರುಗಿದೆ.
ಆರ್ವಿ ಬಸನಗೌಡ ಬೆಕಿನಾಳ (1 ವರ್ಷ ನಾಲ್ಕು ತಿಂಗಳು) ಎಂಬ ಬಾಲಕಿ ಮೃತಪಟ್ಟಿದ್ದು, ಟಾಟಾ ಏಸ್ ವಾಹನವನ್ನು ರಿವರ್ಸ್ ತೆಗೆದುಕೊಳ್ಳುವಾಗ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.