ವಡಗೇರಾ: ‘ಮಕ್ಕಳ ಸ್ನೇಹಿ ಶಾಲಾ ವಾತಾವರಣ ನಿರ್ಮಿಸಲು ಸರ್ಕಾರ ನರೇಗಾ ಯೋಜನೆಯಡಿ ಸಮಗ್ರ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಸಂಗ್ವಾರ ಹೇಳಿದರು.
ತಾಲ್ಲೂಕಿನ ಉಳ್ಳೆಸೂಗುರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊರಟರು ಗ್ರಾಮದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ‘ನಮ್ಮ ಶಾಲೆ ನಮ್ಮಅಭಿಯಾನ’ದಡಿ ಶಾಲಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ತಾಲ್ಲೂಕಿನ ಉಳ್ಳೆಸೂಗುರು, ಐಕೂರು, ಹೈಯಾಳಿ (ಬಿ), ಟಿ.ವಡಗೇರಾ, ಗುಂಡಗುರ್ತಿ ಗ್ರಾಮ ಪಂಚಾಯಿತಿ ಸೇರಿದಂತೆ ಇತರೆ 17 ಗ್ರಾಮ ಪಂಚಾಯತಿಗಳಲ್ಲಿ 2025-26ನೇ ಸಾಲಿನ ಶಾಲಾ ಅಭಿವೃದ್ಧಿ ಕಾಮಗಾರಿಗಳಾದ ಶಾಲಾ ಕಟ್ಟಡ, ಕಾಂಪೌಂಡ್, ಅಡುಗೆ ಕೋಣೆ, ಶೌಚಾಲಯ, ಅಂಗನವಾಡಿ, ಆಟದ ಮೈದಾನ ಹಾಗೂ ಇತರೆ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದರು.
ಗ್ರಾಮೀಣ ಭಾಗದ ಮಕ್ಕಳಿಗೆ ಆಟ-ಪಾಠದ ಜತೆಗೆ ಉತ್ತಮ ಪರಿಸರ, ಸ್ವಚ್ಛತೆ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಸರ್ಕಾರ ಆದ್ಯತೆ ನೀಡುತ್ತಿದೆ. ಹೀಗಾಗಿ ನರೇಗಾ ಯೋಜನೆಯಡಿ ಶಾಲಾ ಮಕ್ಕಳಿಗೆ ಕ್ರೀಡೆಗಳಿಗೆ ಪ್ರೋತ್ಸಾಹಿಸಲು ಗುಣಮಟ್ಟದ ಆಟದ ಮೈದಾನಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದರು.
ಗ್ರಾ.ಪಂ ಅಧ್ಯಕ್ಷ ಶರಣಪ್ಪ, ಎಸ್‌ಡಿಎಂಸಿ ಅಧ್ಯಕ್ಷ, ಪಿಡಿಒ ಬಿ.ಆರ್ ಪಾಟೀಲ, ರವೀಂದ್ರ ದೇಸಾಯಿ, ದುರ್ಗೇಶ್, ಮಂಜುನಾಥ, ಬಾಸ್ಕರರಾವ್, ಗ್ರಾ.ಪಂ ಸದಸ್ಯ ಹಣಮಂತ್ರಾಯ, ಬಸ್ಸಪ್ಪ ಕಾವಲಿ, ರವಿ ಪಾಟೀಲ, ನಂದಣ್ಣಗೌಡ ಸೇರಿದಂತೆ ಇತರರಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.