ಬಾಲ್ಯ ವಿವಾಹ
ಕೆಂಭಾವಿ: ವಲಯದ ಗ್ರಾಮವೊಂದರಲ್ಲಿ ಬಾಲ್ಯವಿವಾಹ ನಡೆದಿದ್ದು, ಕಳೆದ ಎರಡು ತಿಂಗಳ ಹಿಂದೆ ಅಪ್ರಾಪ್ತೆಯ ಮದುವೆ ನಡೆದಿತ್ತು ಎನ್ನಲಾಗಿದೆ.
ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಯ ಮಹಿಳಾ ಮೇಲ್ವಿಚಾರಕಿ ಶಶಿಕಲಾ ಬಾಗೋಡಿ ಅವರು ನೀಡಿದ ದೂರಿನ ಮೇರೆಗೆ ಅಪ್ರಾಪ್ತೆಯ ತಂದೆ, ತಾಯಿ ಸಂಬಂಧಿರು, ಅತ್ತೆ, ಮಾವನ ವಿರುದ್ಧ ಕೆಂಭಾವಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಪ್ರಾಪ್ತೆಯನ್ನು ಸಾಂತ್ವನ ಕೇಂದ್ರಕ್ಕೆ ಕಳಿಸಲಾಗಿದೆ ಎಂದು ಸಿಡಿಪಿಒ ಲಾಲಸಾಬ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.