ADVERTISEMENT

ಹುಣಸಗಿ: ಗ್ರಾ.ಪಂ ಆಡಳಿತದಿಂದ ಸ್ವಚ್ಛತೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2023, 6:08 IST
Last Updated 21 ಜನವರಿ 2023, 6:08 IST
ಹುಣಸಗಿ ತಾಲ್ಲೂಕಿನ ಕೊಡೇಕಲ್ಲ ಗ್ರಾಮದದಲ್ಲಿ ನಡೆದ ವಿವಿಧ ಯೋಜನೆಗಳ ಉದ್ಘಾಟನೆ ಸಮಾರಂಭದ ಸ್ಥಳವನ್ನು ಸ್ವಚ್ಛ ಮಾಡುತ್ತಿರುವ ಗ್ರಾ.ಪಂ ಸಿಬ್ಬಂದಿ
ಹುಣಸಗಿ ತಾಲ್ಲೂಕಿನ ಕೊಡೇಕಲ್ಲ ಗ್ರಾಮದದಲ್ಲಿ ನಡೆದ ವಿವಿಧ ಯೋಜನೆಗಳ ಉದ್ಘಾಟನೆ ಸಮಾರಂಭದ ಸ್ಥಳವನ್ನು ಸ್ವಚ್ಛ ಮಾಡುತ್ತಿರುವ ಗ್ರಾ.ಪಂ ಸಿಬ್ಬಂದಿ   

ಹುಣಸಗಿ: ಪ್ರಧಾನಿ ನರೇಂದ್ರ ಮೋದಿ ತಾಲ್ಲೂಕಿನ ಕೊಡೇಕಲ್ಲ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮ ನಡೆದ 54 ಎಕರೆ ಪ್ರದೇಶವನ್ನು ಶುಕ್ರವಾರ ಬೆಳಿಗ್ಗೆಯಿಂದಲೇ ಗ್ರಾ.ಪಂ ಸಿಬ್ಬಂದಿ ಸ್ವಚ್ಛಗೊಳಿಸಿದರು ಎಂದು ಪಿಡಿಒ ಸಂಗಣ್ಣ ನಾಗಬೇನಾಳ ತಿಳಿಸಿದರು.

ಸುಮಾರು 40ಕ್ಕೂ ಹೆಚ್ಚು ಸ್ವಯಂ ಸೇವಕರು ಹಾಗೂ ಗ್ರಾಮ ಪಂಚಾಯಿತಿಯ 40 ಸಿಬ್ಬಂದಿ ಬೆಳಿಗ್ಗೆಯಿಂದ ವೇದಿಕೆ ಸ್ಥಳದಲ್ಲಿ ಬಿದ್ದಿರುವ ಕಸ, ಪ್ಲಾಸ್ಟಿಕ್, ನೀರಿನ ಬಾಟಲ್‌ಗಳನ್ನು ಸ್ವಚ್ಛ ಮಾಡಿದ್ದಾರೆ. 8 ಕಸ ವಿಲೇವಾರಿ ವಾಹನ, 2 ಟ್ರಾಕ್ಟರ್‌ಗಳನ್ನು ಬಳಸಿಕೊಳ್ಳಲಾಗಿದೆ ಎಂದು ಗೆದ್ದಲಮರಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮೋಹನ ಹುಲ್ಲೂರು ಹೇಳಿದರು.

ಜನರು ಊಟ ಮಾಡಿರುವ ತಟ್ಟೆಗಳನ್ನು ಶೇಖರಿಸಿ ಆಳವಾದ ತಗ್ಗು ತೋಡಿ ಅಲ್ಲಿ ವಿಲೇವಾರಿ ಮಾಡುವಂತೆ ಸೂಚಿಸಲಾಗಿದೆ ಎಂದು ಹುಣಸಗಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಬಸಯ್ಯಸ್ವಾಮಿ ಹಿರೇಮಠ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.