ADVERTISEMENT

ಯಾದಗಿರಿ: ದೇವತ್ಕಲ್ ಗ್ರಾಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಿಎಂ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2022, 7:07 IST
Last Updated 19 ಮಾರ್ಚ್ 2022, 7:07 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹೆಲಿಪ್ಯಾಡ್‌ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹೆಲಿಪ್ಯಾಡ್‌ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.   

ದೇವತ್ಕಲ್‌:ಜಿಲ್ಲೆಯ ಸುರಪುರತಾಲ್ಲೂಕಿನ ದೇವತ್ಕಲ್ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ,ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸಮತ್ತು ಉದ್ಘಾಟನೆ ನೆರವೇರಿಸಲು ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹೆಲಿಪ್ಯಾಡ್‌ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಜಿಂದಾಲ್ ಏರ್ಪೋರ್ಟ್ ನಿಂದ ಬೆಳಿಗ್ಗೆ 11:30 ಕ್ಕೆ ದೇವತ್ಕಲ್ ಗ್ರಾಮಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದಸಿಎಂ ಅವರಿಗೆ ಕಾರ್ಯಕ್ರಮದಲ್ಲಿ ಸಚಿವರಾದ ಆರ್.ಅಶೋಕ್, ಗೋವಿಂದ ಕಾರಜೋಳ, ಪ್ರಭು ಚವಾಣ್ ಸಾಥ್ ನೀಡಲಿದ್ದಾರೆ.

₹1,024 ಕೋಟಿ ವೆಚ್ಚದ ಕಾಮಗಾರಿಗೆ ಸಿಎಂ ಶಂಕುಸ್ಥಾಪನೆ:ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶನಿವಾರ ದೇವತ್ಕಲ್ ಗ್ರಾಮದಲ್ಲಿ ₹1,024 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವ 78 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜೊತೆಗೆ ₹ 36 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ 24 ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಿದ್ದಾರೆ.

ADVERTISEMENT

ಬಳಿಕ ದೇವತ್ಕಲ್ ನಿಂದ ಹೆಲಿಕಾಪ್ಟರ್ ಮೂಲಕ ಶಹಾಪುರ ತಾಲ್ಲೂಕಿನ ದೋರನಹಳ್ಳಿ ಗ್ರಾಮಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಬೊಮ್ಮಾಯಿ, ದೋರನಹಳ್ಳಿ ಸಿಲಿಂಡರ್ ಸ್ಫೋಟದಲ್ಲಿ ಮೃತ ಕುಟುಂಬದ ಸದಸ್ಯರಿಗೆ ಸಾಂತ್ವಾನ, ₹5 ಲಕ್ಷ ಪರಿಹಾರ ಚೆಕ್ ವಿತರಿಸಲಿದ್ದಾರೆ.

ಸಿಲಿಂಡರ್ ಸ್ಫೋಟದಲ್ಲಿ ಮೂರು ಪುಟಾಣಿ ಮಕ್ಕಳು ಸೇರಿ 15 ಜನ ಸಾವನ್ನಪ್ಪಿದ್ದಾರೆ.

ಕಂದಾಯ ಸಚಿವರ ಗ್ರಾಮ ವಾಸ್ತವ್ಯ:ಸಿಎಂ ನಿರ್ಗಮನದ ನಂತರ ಕಂದಾಯ ಸಚಿವ ಆರ್. ಅಶೋಕ ಅವರು ಒಟ್ಟು ₹738.95 ಲಕ್ಷ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವುದರ ಜೊತೆಗೆ ಇತರೆ ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಿದ್ದಾರೆ.

ಕಂದಾಯ ಸಚಿವರು ಶನಿವಾರ ದೇವತ್ಕಲ್ ಗ್ರಾಮದಲ್ಲಿ ವಾಸ್ತವ್ಯ ಮಾಡಿ ಸಾರ್ವಜನಿಕರ ಅವಾಹಲು ಸ್ವೀಕರಿಸಲಿದ್ದು, ಭಾನುವಾರ ಬೆಳಿಗ್ಗೆ 11.30 ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.