ADVERTISEMENT

ಯಾದಗಿರಿ: ಅಲಂಕೃತ ಟ್ರ್ಯಾಕ್ಟರ್ ಮೂಲಕ ಮುಖ್ಯಮಂತ್ರಿ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2022, 8:28 IST
Last Updated 19 ಮಾರ್ಚ್ 2022, 8:28 IST
ಗೋವಿಂದ ಕಾರಜೋಳ, ಆರ್. ಅಶೋಕ ಜೊತೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಗೋವಿಂದ ಕಾರಜೋಳ, ಆರ್. ಅಶೋಕ ಜೊತೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ   

ದೇವತ್ಕಲ್ (ಯಾದಗಿರಿ): ವಿವಿಧ ಅಭಿವೃದ್ಧಿ ಕಾಮಗಾರಿ ಮತ್ತು ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಲಂಕೃತ ಟ್ರ್ಯಾಕ್ಟರ್ ಮೂಲಕ ಹೆಲಿಪ್ಯಾಡ್ ನಿಂದ ವೇದಿಕೆ ವರೆಗೆ ಮೆರವಣಿಗೆ ಮಾಡಲಾಯಿತು.

ಮುಖ್ಯಮಂತ್ರಿಯವರ ಜೊತೆಯಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದಕಾರಜೋಳ, ಕಂದಾಯ ಸಚಿವ ಆರ್. ಅಶೋಕ, ಜಿಲ್ಲಾ
ಉಸ್ತುವಾರಿ ಪ್ರಭು ಚವಾಣ್, ಕರ್ನಾಟಕ ನಗರ ನೀರು ಸರಬರಾಜು ಮತ್ತುಒಳಚರಂಡಿ ಮಂಡಳಿ ಅಧ್ಯಕ್ಷ ಹಾಗೂ ಸುರಪುರ ಶಾಸಕ ನರಸಿಂಹನಾಯಕ (ರಾಜುಗೌಡ), ರಾಯಚೂರು ಕ್ಷೇತ್ರದ ಸಂಸದ ರಾಜಾ ಅಮರೇಶ್ವರನಾಯಕ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ,ಭೀಮರಾಯನಗುಡಿ ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ದೇವತ್ಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗಮ್ಮ ಬಸಪ್ಪತಳವಾರ, ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್,ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಣಾಧಿಕಾರಿ ಅಮರೇಶ ನಾಯ್ಕ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ. ವೇದಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.