ADVERTISEMENT

ಯಾದಗಿರಿ: ₹536 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ ಚಾಲನೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2021, 11:04 IST
Last Updated 6 ಜನವರಿ 2021, 11:04 IST
ಯಾದಗಿರಿ ಸಮೀಪದ ಮುದ್ನಾಳ ಬಳಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು
ಯಾದಗಿರಿ ಸಮೀಪದ ಮುದ್ನಾಳ ಬಳಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು   

ಯಾದಗಿರಿ: ತಾಲ್ಲೂಕಿನ ಮುದ್ನಾಳ ಗ್ರಾಮದಲ್ಲಿರುವ ನೂತನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರೆ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನೆರವೇರಿಸಿದರು.

₹17.66 ಕೋಟಿ ವೆಚ್ಚದಲ್ಲಿ ವರ್ಕನಳ್ಳಿಯಲ್ಲಿ ನಿರ್ಮಾಣಗೊಂಡಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ, ₹3.80ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಯಾದಗಿರಿ ನಗರದಲ್ಲಿ ನೂತನ ನಗರ ಸಾರಿಗೆ ಬಸ್ ನಿಲ್ದಾಣ ಹಾಗೂ ವಿಭಾಗೀಯ ಕಚೇರಿ, ₹1.35 ಕೋಟಿ ವೆಚ್ಚದ ವಡಗೇರಾ ತಾಲ್ಲೂಕಿನ ಬೆಂಡೆಬೆಂಬಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು, ₹1.25 ಕೋಟಿ ವೆಚ್ಚದಲ್ಲಿ ವಡಗೇರಾ ತಾಲ್ಲೂಕಿನ ಸರ್ಕಾರಿ ಪ್ರೌಢ ಶಾಲೆಗೆ ಹೆಚ್ಚುವರಿ 10 ಕೋಣೆಗಳ ನಿರ್ಮಾಣ, ₹1 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಯಾದಗಿರಿ ತಾಲ್ಲೂಕಿನ ಮುಂಡರಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಕಟ್ಟಡ, ₹50 ಲಕ್ಷ ವೆಚ್ಚದಲ್ಲಿ ಯಾದಗಿರಿ ನಗರದ ಮುರುಘೇಂದ್ರ ಮಠದ ಹತ್ತಿರ ಯಾತ್ರಿಕ ನಿವಾಸ ಕಟ್ಟಡ ಹಾಗೂ ₹50 ಲಕ್ಷ ಎಚ್ಚದಲ್ಲಿ ವಡಗೇರಾ ತಾಲ್ಲೂಕಿನ ಸಂಗಮನಾಥ ದೇವಸ್ಥಾನದ ಹತ್ತಿರ ಯಾತ್ರಿ ನಿವಾಸ ಕಟ್ಟಡ ಕಾಮಗಾರಿಗಳಿಗೆ ಚಾಲನೆ ನೀಡಿದರು.

₹1 ಕೋಟಿ ವೆಚ್ಚದಲ್ಲಿ ಯಾದಗಿರಿ ನಗರದಲ್ಲಿ ಮೀನು ಮಾರುಕಟ್ಟೆ ಸ್ಥಾಪನೆ ಸೇರಿದಂತೆ ಒಟ್ಟಾರೆ ಅಂದಾಜು ₹536.91 ವೆಚ್ಚದ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿದರು.

ಈ ವೇಳೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ. ಚವ್ಹಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ. ಕೆ ಸುಧಾಕರ್, ಕರ್ನಾಟಕ ನೀರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಹಾಗೂ ಸುರಪುರ ಶಾಸಕ ನರಸಿಂಹ ನಾಯಕ (ರಾಜೂಗೌಡ), ಸಂಸದರಾದ ರಾಜಾ ಅಮರೇಶ ನಾಯಕ, ಶಾಸಕ ವೆಂಕಟರೆಡ್ಡಿ ಮುದ್ನಾಳ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸವಗೌಡ ಪಾಟೀಲ ಯಡಿಯಾಪುರ ಸೇರಿದಂತೆ ಜನಪ್ರತಿನಿಧಿಗಳು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.