ADVERTISEMENT

ವೈದ್ಯಕೀಯ ಕಾಲೇಜು ಆರಂಭಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 25 ಜೂನ್ 2019, 16:02 IST
Last Updated 25 ಜೂನ್ 2019, 16:02 IST
ಯಾದಗಿರಿಯ ಸುಭಾಷ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ವೈದ್ಯಕೀಯ ಕಾಲೇಜಿಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದರು
ಯಾದಗಿರಿಯ ಸುಭಾಷ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ವೈದ್ಯಕೀಯ ಕಾಲೇಜಿಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದರು   

ಯಾದಗಿರಿ: ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದ ಸುಭಾಷ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಚಂಡರಕಿ ಗ್ರಾಮ ವಾಸ್ತವ್ಯ ವೇಳೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಜಿಲ್ಲೆಗೆ ವೈದ್ಯಕೀಯ ಕಾಲೇಜು ಅವಶ್ಯವಿಲ್ಲ. ಇದು ಇಲ್ಲಿಯವರಿಗೆ ಉಪಯೋಗವಾಗುವುದಿಲ್ಲ ಎಂದು ಬಾಲಿಷ ಹೇಳಿಕೆ ನೀಡಿದ್ದಾರೆ. ಕೂಡಲೇ ಈ ಹೇಳಿಕೆ ಹಿಂಪಡೆದು ವೈದ್ಯಕೀಯ ಕಾಲೇಜಿಗೆ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ವೈದ್ಯಕೀಯ ಕಾಲೇಜು ನಿರ್ಮಾಣ ಆಗುವುದರಿಂದ ಈ ಭಾಗದ ಜನರಿಗೆ ಅನುಕೂಲವಾಗಲಿದೆ. ಹೀಗಾಗಿ ವೈದ್ಯಕೀಯ ಕಾಲೇಜಿಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿದರು.

ADVERTISEMENT

ಇದಕ್ಕೂ ಮುನ್ನ ಕುಮಾರಸ್ವಾಮಿ ಅವರ ಅಣಕು ಶವಯಾತ್ರೆ ಮಾಡಿ, ಟೈರ್‌ಗೆಬೆಂಕಿ ಹಚ್ಚಿ ಮುಖ್ಯಮಂತ್ರಿಯ ವಿರುದ್ಧ ಘೋಷಣೆ ಕೂಗಿದರು.

ಈ ವೇಳೆ ಕರವೇ ಉತ್ತರ ಕರ್ನಾಟಕದ ಅಧ್ಯಕ್ಷ ಶರಣು ಬಿ. ಗದ್ದುಗೆ, ಸಿದ್ದು ರೆಡ್ಡಿ, ರವಿ ದೇವರಮನಿ, ಶರಣು ಇಟಗಿ, ಬಸವರಾಜ, ಕಾಶೀಂ ಪಟೇಲ್, ಅರುಣ ಬಾಪುಗೌಡ, ನಾಗು ಆವಂಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.