ADVERTISEMENT

ಇಲಾಖೆ ಯೋಜನೆಗಳು ಜಾರಿಗೆ ಬದ್ಧ :ಸಚಿವೆ ಶಶಿಕಲಾ ಜೊಲ್ಲೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2019, 16:11 IST
Last Updated 24 ಡಿಸೆಂಬರ್ 2019, 16:11 IST
ಯಾದಗಿರಿ ನಗರದ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿದರು
ಯಾದಗಿರಿ ನಗರದ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿದರು   

ಯಾದಗಿರಿ: ‘ಕೇಂದ್ರ ಮತ್ತು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳೇ ಇರುವುದರಿಂದ ಅಭಿವೃದ್ಧಿಗೆ ಅನುಕೂಲವಾಗಲಿದೆ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ನಗರದ ಬಿಜೆಪಿ ಕಚೇರಿಗೆ ಮಂಗಳವಾರ ಭೇಟಿ ನೀಡಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಗಳು ಜನಪರವಾಗಿ ಉತ್ತಮ ಆಡಳಿತ ನೀಡುತ್ತಿವೆ. ಬಹಳ ವರ್ಷಗಳ ಬಳಿಕ ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಆಡಳಿತದಲ್ಲಿರುವುದು ಹೆಮ್ಮೆಯ ವಿಚಾರವಾಗಿದೆ’ ಎಂದರು.

ADVERTISEMENT

ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆಹಾರ ಮತ್ತು ನಾಗರಿಕರ ವ್ಯವಹಾರ ಇಲಾಖೆಯ ಯೋಜನೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ತಲುಪಿಸಲು ಸಿದ್ಧಳಿದ್ದೇನೆ. ಸಾರ್ವಜನಿಕರು, ಪಕ್ಷದ ಕಾರ್ಯಕರ್ತರು ತಮ್ಮ ಬೇಡಿಕೆಗಳು ಇದ್ದಲ್ಲಿ ಶಾಸಕರ ಗಮನಕ್ಕೆ ತರಬೇಕು. ಅವುಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು’ ಎಂದರು.

‘ಸ್ವಾಮಿ ವಿವೇಕಾನಂದರ ನಂತರ ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಏರಿಸಲು ಪ್ರಧಾನಿ ಮೋದಿ ಪಣತೊಟ್ಟಿದ್ದಾರೆ’ ಎಂದರು.

ಶಾಸಕ ವೆಂಕಟರೆಡ್ಡಿ ಮುದ್ನಾಳ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ಪಕ್ಷದ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ, ರಾಜ್ಯ ಉಪಾಧ್ಯಕ್ಷೆ ನಾಗರತ್ನ ಕುಪ್ಪಿ, ಸಂಸದ ಅಣ್ಣಾ ಸಾಹೇಬ ಜೊಲ್ಲೆ, ಸಾಯಬಣ್ಣ ಬೋರಬಂಡಾ, ದೇವೇಂದ್ರನಾಥ ನಾದ, ವೀಣಾ ಮೋದಿ, ವೆಂಕಟರೆಡ್ಡಿ ಅಬ್ಬೆತುಮಕೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.