ಶಹಾಪುರ: ಯಾವುದೇ ಅನಾಹುತದಿಂದ ಕುರಿ ಮೃತಪಟ್ಟರೆ ಪ್ರತಿ ಕುರಿಗೆ ₹ 7,500 ಪರಿಹಾರ ಧನ ನೀಡುವ ಯೋಜನೆ ಮತ್ತೆ ಜಾರಿಯಾಗಿದೆ. ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಯೋಜನೆ ಸ್ಥಗಿತಗೊಳಿಸಿತ್ತು. ಈಗ ನಮ್ಮ ಸರ್ಕಾರ ಮತ್ತೆ ಯೋಜನೆ ಜಾರಿ ಮಾಡುವ ಮೂಲಕ ಕುರಿಗಾಹಿ ಅವರ ಹಿತ ಕಾಪಾಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು.
ನಗರದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ವಲಸೆ ಕುರಿಗಾರರಿಗೆ ಗುರುತಿನ ಚೀಟಿ ಹಾಗೂ ವಿವಿಧ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯದ ಚೆಕ್ ವಿತರಿಸಿ ಅವರು ಮಾತನಾಡಿದರು.
ಡಿಸಿಸಿ ಬ್ಯಾಂಕ್, ಖಾದಿ ಮಂಡಳಿ ಒಪ್ಪಂದ ಮಾಡಿಕೊಂಡಿದ್ದು ₹ 2 ಲಕ್ಷದವರೆಗೆ ಕುರಿ ಖರೀದಿ ಮಾಡಲು ಸಾಲ ನೀಡುವ ಯೋಜನೆ ರೂಪಿಸಲಾಗಿದೆ. ಸಾಕಷ್ಟು ತೊಂದರೆಗಳ ನಡುವೆ ಕೊಟ್ಟ ಮಾತಿನಂತೆ 5 ಗ್ಯಾರಂಟಿಗಳನ್ನು ಸರ್ಕಾರ ನೀಡುತ್ತಲಿದೆ ಎಂದರು.
ಕುರಿ ಮತ್ತು ಮೇಕೆ ಸಾಕಾಣಿಕೆದಾರ ಮಹಾಮಂಡಳಿ ನಿರ್ದೇಶಕ ಶಾಂತಗೌಡ ನಾಗನಟಿಗಿ, ನಗರಸಭೆ ಅಧ್ಯಕ್ಷೆ ಮೆಹೆರುನ್ನಿಸಾ ಬೇಗಂ, ಪಶುಪಾಲನ ಇಲಾಖೆಯ ಉಪನಿರ್ದೇಶಕ ಡಾ.ರಾಜು ದೇಶಮುಖ, ತಹಶೀಲ್ದಾರ್ ಸಿದ್ದಾರೂಢ ಬನ್ನಿಕೊಪ್ಪ, ತಾಲ್ಲೂಕು ಪಂಚಾಯಿತಿ ಇಒ ಬಸವರಾಜ ಶರಬೈ, ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ, ಗೌಡಪ್ಪಗೌಡ ಆಲ್ದಾಳ, ತಿರಪುಪತಿಗೌಡ ಬಾಣತಿಹಾಳ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.