ADVERTISEMENT

ಸ್ಪರ್ಧಾತ್ಮಕ ಪರೀಕ್ಷೆಗೆ ಕಠಿಣ ಪರಿಶ್ರಮ ಅಗತ್ಯ: ಹಣಮಂತಪ್ಪ ಚಂದ್ಲಾಪುರ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2025, 5:53 IST
Last Updated 8 ನವೆಂಬರ್ 2025, 5:53 IST
ಸುರಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು
ಸುರಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು   

ಸುರಪುರ: ‘ಕಠಿಣ ಪರಿಶ್ರಮದಿಂದ ಅಭ್ಯಾಸ ನಡೆಸಿದರೆ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಕಾಣಲು ಸಾಧ್ಯ’ ಎಂದು ಕಾರಟಗಿಯ ಸಿಎಂಎಸ್ ಪಿಯು ಕಾಲೇಜು ಉಪನ್ಯಾಸಕ ಹಣಮಂತಪ್ಪ ಚಂದ್ಲಾಪುರ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಪರೀಕ್ಷೆ ಬಂದಾಗಲೆ ಓದುವುದು ತಪ್ಪು. ಅಂದಿನ ಅಭ್ಯಾಸ ಅದೇ ದಿನ ಮಾಡಿ ಮುಗಿಸಬೇಕು. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಭಾಗವಹಿಸಬೇಕು. ಇದರಿಂದ ಓದಿಗೆ ಇನ್ನಷ್ಟು ಪೂರಕ ಮಾತಾವರಣ ನಿರ್ಮಿಸುತ್ತದೆ’ ಎಂದರು.

ADVERTISEMENT

ನಿವೃತ್ತ ಪ್ರಾಂಶುಪಾಲ ಆನಂದಕುಮಾರ ಜೋಷಿ ಮಾತನಾಡಿ, ‘ನನ್ನ ಅವಧಿಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಸಂತೃಪ್ತಿ ನನಗಿದೆ. ನನಗೆ ಸಹಾಯ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞನಾಗಿರುವೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಬಲಭೀಮರಾಯ ದೇಸಾಯಿ ಮಾತನಾಡಿ, ‘ಗ್ರಂಥಾಲಯವಿದೆ 5 ಲಕ್ಷ ಪುಸ್ತಕಗಳಿವೆ, ದಿನಪತ್ರಿಕೆ, ಮಾಸ ಪತ್ರಿಕೆ ಸ್ಪರ್ಧಾತ್ಮಕ ಪರೀಕ್ಷೆಗೆ ಬೇಕಾಗುವ ಪುಸ್ತಕಗಳನ್ನು ತರಿಸಿದ್ದೇವೆ. ವಿದ್ಯಾರ್ಥಿಗಳು ಇವುಗಳ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಇದೇ ವೇಳೆ ನಿವೃತ್ತ ಪ್ರಾಂಶುಪಾಲ ಆನಂದಕುಮಾರ ಜೋಷಿ ಅವರನ್ನು ಸನ್ಮಾನಿಸಲಾಯಿತು. ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಮತ್ತು ಸ್ಫರ್ಧಾತ್ಮಕ ಪರೀಕ್ಷೆ ವಿಜೇತರನ್ನು ಪುರಸ್ಕರಿಸಲಾಯಿತು. ಪ್ರಥಮ ವರ್ಷದ ಬಿಎ, ಬಿಕಾಂ, ಬಿಎಸ್‌ಸಿ ವಿದ್ಯಾರ್ಥಿಗಳಿಗೆ ಸ್ವಾಗತಿಸಲಾಯಿತು.

ಪೌರಾಯಕ್ತ ಬಸವರಾಜ ಟಣಕೇದಾರ, ನೌಕರರ ಸಂಘದ ಅಧ್ಯಕ್ಷ ರಾಮಕೃಷ್ಣ ಕಲಬುರಗಿ, ಹಿರಿಯ ಉಪನ್ಯಾಸಕ ಬಸವರಾಜ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಭಂಡಾರೆಪ್ಪ ನಾಟೇಕಾರ, ಉಪನ್ಯಾಸಕರಾದ ವೆಂಕೋಬ ಬಿರಾದಾರ, ಮೋನಯ್ಯ, ಗುರುರಾಜ ನಾಗಲಿಕರ, ಹನುಮಂತ ವಗ್ಗರ್, ಪ್ರಮೋದ ಕುಲಕರ್ಣಿ, ಜಗದೀಶಕುಮಾರ, ಬಸಣ್ಣ ಶೆಟ್ಟಿ, ಮಹಾದೇವಪ್ಪ, ರೂಪಲಕ್ಷ್ಮೀ ಕುಲಕರ್ಣಿ ವೇದಿಕೆಯಲ್ಲಿದ್ದರು.

ಉಪನ್ಯಾಸಕ ದೇವು ಹೆಬ್ಬಾಳ ನಿರೂಪಿಸಿದರು. ಶಾಂತು ನಾಯಕ ಸ್ವಾಗತಿಸಿದರು. ದೇವು ಪಾಟೀಲ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.