ADVERTISEMENT

ಯಾದಗಿರಿ: ‘ಪ್ರಧಾನಿ ‌ಮೋದಿ ಕನಸು ನನಸು ಮಾಡಿ’

ಬಿಜೆಪಿ ಸೇರಿದ ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರು

​ಪ್ರಜಾವಾಣಿ ವಾರ್ತೆ
Published 15 ಮೇ 2022, 4:20 IST
Last Updated 15 ಮೇ 2022, 4:20 IST
ಸೈದಾಪುರ ಪಟ್ಟಣದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು
ಸೈದಾಪುರ ಪಟ್ಟಣದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು   

ಸೈದಾಪುರ: ಪ್ರಧಾನಮಂತ್ರಿ ನರೇಂದ್ರ ಮೋದಿ ಭಾರತ ವಿಶ್ವಗುರು ಆಗುವ ಕನಸು ಕಂಡಿದ್ದಾರೆ. ಅದನ್ನು ಸಾಕಾರ ಗೊಳಿಸಲು ಪ್ರತಿಯೊಬ್ಬ ಕಾರ್ಯಕರ್ತನು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ತಿಳಿಸಿದರು.

ಪಟ್ಟಣದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ಕಾರ್ಯಕರ್ತರನ್ನು ಸ್ವಾಗತಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರಿಗೆ ಮನವಿ ಮಾಡಿ ಕೇತ್ರದ ಅಭಿವೃದ್ಧಿಗೆ ಹೆಚ್ಚು ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ADVERTISEMENT

ಕ್ಷೇತ್ರದ ಜನರ ಗುಳೆ ಹೋಗುವುದನ್ನು ತಪ್ಪಿಸಲು ಕಡೇಚೂರು-ಬಾಡಿಯಾಲ ಕೈಗಾರಿಕಾ ಪ್ರದೇಶದಲ್ಲಿ ಕಾರ್ಖಾನೆಗಳನ್ನು ಸ್ಥಾಪಿಸಲು ಸಚಿವರಲ್ಲಿ ಮನವಿ ಮಾಡುತ್ತೇನೆ ಎಂದರು.

ಆಹಾರ ನಿಗಮ ಮಂಡಳಿ ನಿರ್ದೇಶಕಿ ಅಮರೇಶ್ವರಿ ಚಿಂಚನಸೂರ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿರಂತರ ಕಾರ್ಯಗಳಿಂದ ಬಿಜೆಪಿ ಜನ ಮನ್ನಣೆ ಪಡೆಯುತ್ತಿದೆ ಎಂದು ತಿಳಿಸಿದರು.

ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಿಳಿಸುವ ಕೆಲಸ ಮಾಡುವ ಮೂಲಕ ಮುಂದಿನ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ವಿಧಾನಸಭೆ ಚುನಾವಣೆಗೆ ಪಕ್ಷ ಸಂಘಟಿಸುವಂತೆ ಸಲಹೆ ನೀಡಿದರು.

ಬದ್ದೇಪಲ್ಲಿ, ಚಲ್ಹೇರಿ, ರಾಂಪೂರು ಕೆ, ಅಜಲಾಪುರ ಮತ್ತು ಸೈದಾಪುರ ಗ್ರಾಮದ 200ಕ್ಕೂ ಹೆಚ್ಚು ಜನ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು

ಅಜಲಾಪುರ ಗ್ರಾ.ಪಂ.ಮಾಜಿ ಅಧ್ಯಕ್ಷ ಶರಣಬಸವ ಬಿ.ಸ್ವಾಮಿ ಬದ್ದೆಪಲ್ಲಿ, ಬಸವರಾಜಯ್ಯಸ್ವಾಮಿ ಬದ್ದೇಪಲ್ಲಿ, ತಾ.ಪಂ.ಮಾಜಿ ಸದಸ್ಯ ಚಂದಪ್ಪ ಕಾವಲಿ, ಸೈದಾಪುರ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಶರಣಪ್ಪಗೌಡ ಬಾಲಛೇಡ್, ಸುರೇಶ ಆನಂಪಲ್ಲಿ, ರಮೇಶ ಭೀಮನಹಳ್ಳಿ, ಬಸವರಾಜ ಹಿರೇನೂರು, ಸಿದ್ದಲಿಂಗರೆಡ್ಡಿ ಭೀಮನಹಳ್ಳಿ, ಚಂದ್ರಶೇಖರ ಕಾವಲಿ, ಗ್ರಾ.ಪಂ.ಮಾಜಿ ಸದಸ್ಯ ಮೈಹಿಮೂದು, ಬಾಲುಗೌಡ ಕಲಾಲ, ಮರೆಪ್ಪ, ರಾಮಚಾರಿ, ಬಾಲಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.