ADVERTISEMENT

ಬಸವಕಲ್ಯಾಣದಲ್ಲಿ ಮಲ್ಲಮ್ಮರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಲು ಒತ್ತಾಯ

ಹಿಂದುಳಿದ ವರ್ಗಗಳ ಅಯೋಗದ ಮಾಜಿ ಸದಸ್ಯ ಶರಣಪ್ಪ ಮಾನಗೇರಾ ಕಾಂಗ್ರೆಸ್‌ ವರಿಷ್ಠರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 12 ಜನವರಿ 2021, 4:04 IST
Last Updated 12 ಜನವರಿ 2021, 4:04 IST
ಶರಣಪ್ಪ ಮಾನಗೇರಾ
ಶರಣಪ್ಪ ಮಾನಗೇರಾ   

ಯಾದಗಿರಿ: ‘ಬೀದರ್‌ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ದಿವಂಗತ ಬಿ.ನಾರಾಯಣರಾವ ಅವರ ಪತ್ನಿ ಮಲ್ಲಮ್ಮ ಅವರಿಗೆ ಕಾಂಗ್ರೆಸ್‌ ಪಕ್ಷದಿಂದ ಟಿಕೆಟ್‌ ನೀಡಬೇಕು’ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಶರಣಪ್ಪ ಮಾನಗೇರಾ ಕಾಂಗ್ರೆಸ್‌ ವರಿಷ್ಠರಿಗೆ ಮನವಿ ಮಾಡಿದ್ದಾರೆ.

‘ತೆರವಾದ ಸ್ಥಾನಕ್ಕೆ ಕಾಂಗ್ರೆಸ್‌ ಪಕ್ಷದಿಂದ ಎರಡು ಹೆಸರುಗಳನ್ನು ಬೆಂಗಳೂರಿನಿಂದ ದೆಹಲಿಗೆ ಶಿಫಾರಸು ಮಾಡಲಾಗಿದೆ. ಇದರಲ್ಲಿ ಬಿ.ನಾರಾಯಣರಾವ್ ಅವರ ಪತ್ನಿಗೆ ಟಿಕೆಟ್‌ ನೀಡಬೇಕು’ ಎಂದು ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

‘ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ನಾರಾಯಣರಾವ್‌ ಅವರ ಪತ್ನಿ ಮಲ್ಲಮ್ಮ, ವಿಧಾನ ಪರಿಷತ್‌ ಸದಸ್ಯ ವಿಜಯಸಿಂಗ್‌ ಅವರ ಹೆಸರು ಕಳಿಸಲಾಗಿದೆ. ಇದರಲ್ಲಿ ಮಲ್ಲಮ್ಮ ಅವರ ಹೆಸರು ಅಂತಿಮಗೊಳಿಸಬೇಕು. ಬೀದರ್‌ ಜಿಲ್ಲೆಯಲ್ಲಿ 35 ಸಾವಿರ ಕೋಲಿ, ಕಬ್ಬಲಿಗ ಸಮಾಜದವರಿದ್ದಾರೆ. ಹೀಗಾಗಿ ಕ್ಷೇತ್ರಕ್ಕೆ ಟಿಕೆಟ್‌ ನೀಡುವುದರ ಜೊತೆಗೆ ಗೆಲ್ಲಿಸಲು ಮುಖಂಡರು ಶ್ರಮ ಪಡಬೇಕು’ ಎಂದರು.

ADVERTISEMENT

ಸುದ್ದಿಗೋಷ್ಠಿಯಲ್ಲಿ ಕೋಲಿ, ಕಬ್ಬಲಿಗ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಹಣಮಂತ ಮಡ್ಡಿ, ಸಂಘದ ಗೌರಾವಾಧ್ಯಕ್ಷ ಸಿ.ಎಂ.ಪಟ್ಟೇದಾರ, ನಾಗರತ್ನ ಅನಪುರ, ಹಣಮಂತ ಬಳಿಚಕ್ರ, ಸಾಯಿಬಣ್ಣ, ಬಸವರಾಜ ಬಾಗ್ಲಿ, ದೇವೆಂದ್ರಪ್ಪ ಬೆಸ್ತ, ಭೀಮರೆಡ್ಡಿ ಯರಗೋಳ ಸೇರಿದಂತೆ ಸಮುದಾಯದ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.