ADVERTISEMENT

ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು: ಭೀಮಣ್ಣ ಮೇಟಿ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2024, 14:16 IST
Last Updated 31 ಅಕ್ಟೋಬರ್ 2024, 14:16 IST
ಭೀಮಣ್ಣ ಮೇಟಿ
ಭೀಮಣ್ಣ ಮೇಟಿ   

ಯಾದಗಿರಿ: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿಯಾಗಿ ಗೆಲುವು ಸಾಧಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಭೀಮಣ್ಣ ಮೇಟಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಸರ್ಕಾರ ಮಾಡಿರುವ ಅಭಿವೃದ್ಧಿ ಯೋಜನೆಗಳಿಗೆ ಮತದಾರರು ಮನ್ನಣೆ ನೀಡಲಿದ್ದಾರೆ. ಸಂಡೂರು, ಚನ್ನಪಟ್ಟಣ ಮತ್ತು ಶಿಗ್ಗಾವಿ ಈ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತದಾರರು ಆಶೀರ್ವಾದ ಮಾಡಲಿದ್ದಾರೆ. ಎಲ್ಲೆಡೆ ಉತ್ತಮವಾದ ವಾತಾವರಣ ನಿರ್ಮಾಣವಾಗಿದೆ ಎಂದಿದ್ದಾರೆ.

ಉಪ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳು ಸೋಲುವುದು ಖಚಿತವಾಗಿದೆ. ಮತದಾರರನ್ನು ದಾರಿ ತಪ್ಪಿಸುವಂತಹ ಕೆಲಸ ಅವರು ಮಾಡುತ್ತಿದ್ದಾರೆ. ಸುಳ್ಳು ಭರವಸೆಗಳನ್ನು ಜನರು ಎಂದಿಗೂ ನಂಬುವುದಿಲ್ಲ. ಉಪ ಚುನಾವಣೆಯಲ್ಲಿ ಪ್ರತಿಪಕ್ಷಗಳಿಗೆ ಈಗಲೇ ಸೋಲಿನ ಭೀತಿ ಶುರುವಾಗಿದೆ. ಹೀಗಾಗಿಯೇ ಜನರಿಗೆ ಬರೀ ತಪ್ಪು ಮಾಹಿತಿ ನೀಡುವಲ್ಲಿ ನಿರತರಾಗಿದ್ದಾರೆ. ಇದಕ್ಕೆ ಮತದಾರರು ತಕ್ಕಪಾಠ ಕಲಿಸುವುದು ಖಚಿತವಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.