ADVERTISEMENT

ಕಾಂಗ್ರೆಸ್‌ ಸಿದ್ಧಾಂತ ಮನವರಿಕೆ ಮಾಡಿ: ಚನ್ನಾರಡ್ಡಿ ಪಾಟೀಲ

ಬೂತ್‌ ಮಟ್ಟದ ಕಾರ್ಯಕರ್ತರ ಸಭೆ; ತುನ್ನೂರ ಸಲಹೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2023, 6:10 IST
Last Updated 21 ಜನವರಿ 2023, 6:10 IST
ಯಾದಗಿರಿ ಮತಕ್ಷೇತ್ರದ ಕೊಳ್ಳೂರ ಗ್ರಾಮದಲ್ಲಿ ಶುಕ್ರವಾರ ಬೂತ್‌ ಮಟ್ಟದ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ವಿಧಾನ ಪರಿಷತ್‌ ಮಾಜಿ ಸದಸ್ಯ ಚನ್ನಾರಡ್ಡಿ ಪಾಟೀಲ ತುನ್ನೂರ ಮಾತನಾಡಿದರು
ಯಾದಗಿರಿ ಮತಕ್ಷೇತ್ರದ ಕೊಳ್ಳೂರ ಗ್ರಾಮದಲ್ಲಿ ಶುಕ್ರವಾರ ಬೂತ್‌ ಮಟ್ಟದ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ವಿಧಾನ ಪರಿಷತ್‌ ಮಾಜಿ ಸದಸ್ಯ ಚನ್ನಾರಡ್ಡಿ ಪಾಟೀಲ ತುನ್ನೂರ ಮಾತನಾಡಿದರು   

ಪ್ರಜಾವಾಣಿ ವಾರ್ತೆ

ಯಾದಗಿರಿ: ಕಾಂಗ್ರೆಸ್‌ ಕಾರ್ಯಕರ್ತರು ಗ್ರಾಮಸ್ಥರ ಮನೆ ಬಾಗಿಲಿಗೆ ಹೋಗಿ ಪಕ್ಷದ ತತ್ವ ಹಾಗೂ ಸಿದ್ದಾಂತಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಚನ್ನಾರಡ್ಡಿ ಪಾಟೀಲ ತುನ್ನೂರ ಹೇಳಿದರು.

ಯಾದಗಿರಿ ಮತಕ್ಷೇತ್ರದ ಕೊಳ್ಳೂರ ಗ್ರಾಮದಲ್ಲಿ ಶುಕ್ರವಾರ ಕಾಂಗ್ರೆಸ್‌ ಪಕ್ಷದ ವತಿಯಿಂದ ಆಯೋಜಿಸಿದ್ದ ಬೂತ್‌ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ADVERTISEMENT

ಮುಂಬರುವ ಚುನಾವಣೆಯಲ್ಲಿ ಕಾರ್ಯಕರ್ತರು ಸಂಘಟಿಕರಾಗಿ ಈಗಿನಿಂದಲೇ ಪಕ್ಷದ ಸಂಘಟನೆಯಲ್ಲಿ ತೊಡಗಿ ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನಾಗಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಕಾಂಗ್ರೆಸ್‌ ಮುಖಂಡ ಡಾ.ಎಸ್.ಬಿ.ಕಾಮರಡ್ಡಿ ಮಾತನಾಡಿ, ಕಳೆದ ಆರು ದಶಕದಲ್ಲಿ ಕಾಂಗ್ರೆಸ್‌ ಪಕ್ಷ ದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ಅದನ್ನು ಮರೆಮಾಚಿ ವಿರೋಧ ಪಕ್ಷದವರು ಟೀಕೆ ಮಾಡುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ಟೀಕಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮರಿಗೌಡ ಹುಲ್ಕಲ್, ಪಕ್ಷದ ಮುಖಂಡರಾದ ಡಾ.ಭೀಮಣ್ಣ ಮೇಟಿ ಮಾತನಾಡಿದರು.

ರತಣಪ್ಪ ಸಲಾದಪುರ, ಮಲ್ಲಿಕಾರ್ಜುನರಡ್ಡಿ, ಸಿದ್ದಲಿಂಗರಡ್ಡಿ, ಬಸಣ್ಣ ಭಂಗಿ, ಶಿವರಡ್ಡಿ ಕೊಳ್ಳೂರು, ತಿಮ್ಮಣ್ಣ ನಾಯಕ, ವಿನೋದ್ ಮಾಲಿ ಪಾಟೀಲ, ಹೊನ್ನಯ್ಯ ಗಟ್ಟಿ, ಹನುಮಂತ ರಾಯ ಬೆಣಕಲ್, ಶಿವರೆಡ್ಡಿ ಪಾಟೀಲ, ಮಹೇಶ್ ಬಂಗಿ, ಹನುಮಗೌಡ ಮರ್ಕಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.