ADVERTISEMENT

ಸಂವಿಧಾನದಿಂದ ಎಲ್ಲರಿಗೂ ಸ್ವಾತಂತ್ರ್ಯ: ರಾಮಣ್ಣ ಕಲ್ಲದೇವನಹಳ್ಳಿ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2022, 2:39 IST
Last Updated 27 ನವೆಂಬರ್ 2022, 2:39 IST
ಹುಣಸಗಿ ತಾಲ್ಲೂಕಿನ ಕಲ್ಲದೇವನಹಳ್ಳಿ ಗ್ರಾಮದಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ ಆಚರಿಸಲಾಯಿತು
ಹುಣಸಗಿ ತಾಲ್ಲೂಕಿನ ಕಲ್ಲದೇವನಹಳ್ಳಿ ಗ್ರಾಮದಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ ಆಚರಿಸಲಾಯಿತು   

ಹುಣಸಗಿ: ತಾಲ್ಲೂಕಿನ ಕಲ್ಲದೇವನಹಳ್ಳಿ ಗ್ರಾಮದಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆಯ ಅಂಗವಾಗಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪೀಠಿಕೆ ಓದುವ ಮೂಲಕ ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದಲಿತ ಸಂಘಟನೆ ಕಲಬುರಗಿ ವಿಭಾಗೀಯ ಪ್ರಧಾನ ಸಂಚಾಲಕ ರಾಮಣ್ಣ ಕಲ್ಲದೇವನಹಳ್ಳಿ ಮಾತನಾಡಿ, ಭಾರತ ದೇಶಕ್ಕೆ 1947 ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ದೊರಕಿತು. ಆದರೆ ನಿಜವಾದ ಅರ್ಥದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಿಂದ ಎಲ್ಲಾ ಸಮುದಾಯದವರಿಗೆ ಸ್ವಾತಂತ್ರ್ಯ ಲಭಿಸಿತು ಎಂದರು.

ಮಲ್ಲಣ ಬಡಿಗೇರ,ಯಲ್ಲಪ್ಪ ಇಸಾಂಪೂರ, ಕಾಳಪ್ಪ ಅಗ್ನಿ, ಮಾನಪ್ಪ ಬಡಿಗೇರ, ಜಯಭೀಮ ಬಡಿಗೇರ ಸೇರಿದಂತೆ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.