ADVERTISEMENT

ಕಲುಷಿತ ನೀರು ಸೇವನೆ: ಅಸ್ವಸ್ಥ

ಚಿಂತನಹಳ್ಳಿಯಲ್ಲಿ 95 ಜನಕ್ಕೆ ವಾಂತಿ ಬೇಧಿ: ಡಿಎಚ್‌‌ಒ ಭೇಟಿ

​ಪ್ರಜಾವಾಣಿ ವಾರ್ತೆ
Published 9 ಮೇ 2020, 16:19 IST
Last Updated 9 ಮೇ 2020, 16:19 IST
ಯಾದಗಿರಿ ಜಿಲ್ಲೆಯ ಚಿಂತನಹಳ್ಳಿ ಗ್ರಾಮಸ್ಥರು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಯಾದಗಿರಿ ಜಿಲ್ಲೆಯ ಚಿಂತನಹಳ್ಳಿ ಗ್ರಾಮಸ್ಥರು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ   

ಯಾದಗಿರಿ: ಜಿಲ್ಲೆಯ ಗುರುಮಠಕಲ್‌ ತಾಲ್ಲೂಕಿನ ಚಿಂತನಹಳ್ಳಿ ಗ್ರಾಮದಲ್ಲಿ ಶನಿವಾರ ಕಲುಷಿತ ‌ನೀರು ಸೇವಿಸಿ 95 ಜನ ಅಸ್ವಸ್ಥರಾಗಿದ್ದು, ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಗ್ರಾಮದ ಪುರುಷರು, ಮಹಿಳೆಯರು, ಚಿಕ್ಕಮಕ್ಕಳು ಸೇರಿ 95 ಜನರು ಜನರು ಅಸ್ವಸ್ಥರಾಗಿದ್ದಾರೆ. ಈಗಾಗಲೇ 39 ಜನ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ 14, ಕಂದಕೂರ ಆಸ್ಪತ್ರೆಯಲ್ಲಿ 7, ಚಿಂತನಹಳ್ಳಿ ಶಾಲೆಯಲ್ಲಿ ಮೂವರಿಗೆ ಚಿಕಿತ್ಸೆ ಮುಂದುವರಿದಿದೆ.

‘ಕಲುಷಿತ ನೀರು ಸೇವಿಸಿ ವಾಂತಿ ಬೇಧಿಯಿಂದ ಬಳಲುತ್ತಿದ್ದು, ಗ್ರಾಮಕ್ಕೆ ಭೇಟಿ ನೀಡಿ ನೀರು ಪರಿಶೀಲನೆ ಮಾಡಲಾಗಿದೆ. ಗ್ರಾಮ ಪಂಚಾಯಿತಿಅಧಿಕಾರಿಗಳಿಗೆಸ್ವಚ್ಛತೆ ಕಾಪಾಡಿಕೊಳ್ಳಿ’ ಎಂದು ನಿರ್ದೇಶನ ನೀಡಲಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎಸ್‌.ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.