ADVERTISEMENT

ಕೊರೊನಾ: ಜಿಲ್ಲೆಯ 16 ವರದಿ ನೆಗೆಟಿವ್

ಕೊರೊನಾ ಪರೀಕ್ಷೆಗಾಗಿ 5 ಹೊಸ ಮಾದರಿ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2020, 17:12 IST
Last Updated 4 ಏಪ್ರಿಲ್ 2020, 17:12 IST

ಯಾದಗಿರಿ: ಕೊರೊನಾ ವೈರಸ್‍ಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಕಳುಹಿಸಿದ್ದ ಒಟ್ಟು 16 ವ್ಯಕ್ತಿಗಳ ಮಾದರಿಗಳ ಪೈಕಿ ಬಾಕಿಯಿದ್ದ 7 ಮಾದರಿಗಳ ವರದಿ ಕೂಡ ಶನಿವಾರ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಶನಿವಾರ ಮತ್ತೆ 5 ವ್ಯಕ್ತಿಗಳ ಮಾದರಿ ಸಂಗ್ರಹಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ತಿಳಿಸಿದ್ದಾರೆ.

ಜಿಲ್ಲಾಸ್ಪತ್ರೆಯ ಐಸೊಲೇಷನ್ ವಾರ್ಡ್‍ನಲ್ಲಿ ಪ್ರತ್ಯೇಕವಾಗಿರಿಸಿದ್ದ ಇಬ್ಬರನ್ನು ಶನಿವಾರ ಬಿಡುಗಡೆ ಮಾಡಲಾಗಿದೆ. ಅರಕೇರಾ (ಕೆ) ಹಾಸ್ಟೆಲ್‍ನ ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿ 24 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.

ನಿಜಾಮುದ್ದೀನ್ ಸಭೆಗೆ ಹೋದವರ ಮಾಹಿತಿ ನೀಡಿ: ನಿಜಾಮುದ್ದೀನ್ ತಬ್ಲೀಗಿ ಮರ್ಕಜ್ ಸಭೆಯಲ್ಲಿ ಭಾಗವಹಿಸಿ ಜಿಲ್ಲೆಗೆ ವಾಪಸ್ಸಾಗಿರುವ ಜನರು ಕಂಡುಬಂದಲ್ಲಿ ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950 ಗೆ ಕರೆ ಮಾಡಿ ಮಾಹಿತಿ ನೀಡಲು ಸಾರ್ವಜನಿಕರಲ್ಲಿ ಕೋರಿದ್ದಾರೆ.

ADVERTISEMENT

71 ಜನರ ಪೈಕಿ ಒಟ್ಟು 11 ಜನ 28 ದಿನಗಳ ಅವಲೋಕನ ಅವಧಿ ಪೂರ್ಣಗೊಳಿಸಿದ್ದು, ಬಾಕಿ 60 ಜನರನ್ನು ಅವರ ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.