ADVERTISEMENT

ಹತ್ತಿಗೆ ಬೆಂಬಲ ಬೆಲೆ ನೀಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 31 ಜುಲೈ 2024, 14:33 IST
Last Updated 31 ಜುಲೈ 2024, 14:33 IST
31 ಎಚ್ ಡಬ್ಲು1 ವಡಗೇರಾ: ವಡಗೇರಾ ತಾಲ್ಲೂಕಿನ ಸೀಮಾಂತರ ಪ್ರದೇಶದ ಜಮೀನಿನಲ್ಲಿ ಬೆಳೆದ ಹತ್ತಿ ಬೆಳೆ
31 ಎಚ್ ಡಬ್ಲು1 ವಡಗೇರಾ: ವಡಗೇರಾ ತಾಲ್ಲೂಕಿನ ಸೀಮಾಂತರ ಪ್ರದೇಶದ ಜಮೀನಿನಲ್ಲಿ ಬೆಳೆದ ಹತ್ತಿ ಬೆಳೆ   

ವಡಗೇರಾ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹತ್ತಿ ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಪ್ರಗತಿಪರ ರೈತರಾದ ಶ್ರೀನಿವಾಸ ಜಡಿ ಆಗ್ರಹಿಸಿದ್ದಾರೆ.

ವಡಗೇರಾ ತಾಲ್ಲೂಕಿನ ವ್ಯಾಪ್ತಿಯಲ್ಲಿ ಸಕಾಲದಲ್ಲಿ ಉತ್ತಮವಾಗಿ ಮಳೆಯಾಗಿದೆ. ಈಗಾಲೇ ರಸಗೊಬ್ಬರಕ್ಕಾಗಿ, ಬಿತ್ತನೆ ಬೀಜಕ್ಕಾಗಿ ಹಾಗೂ ಜಮೀನಿನಲ್ಲಿ ಬೆಳೆದ ಕಳೆ ತೆಗೆಯಲು ರೈತರು ಸಾಲ ಮಾಡಿ ಸಾವಿರಾರು ರೂಪಾಯಿ ಖರ್ಚು ಮಾಡಿದ್ದಾರೆ.

ಹಾಗೆಯೇ ರಸಗೊಬ್ಬರ ಬೆಲೆ ದುಬಾರಿಯಾಗಿರುವದರಿಂದ ರೈತರು ಬೆಳೆದ ಹತ್ತಿ ಬೆಳೆಗೆ ಬೆಂಬಲ ಬೆಲೆ ಕೊಡದಿದ್ದರೆ ಆರ್ಥಿಕವಾಗಿ ಬಹಳಷ್ಟು ನಷ್ಟವಾಗುವುದರ ಜತೆಗೆ ಮಾಡಿದ ಸಾಲವನ್ನು ತೀರಿಸಲು ತೊದರೆಯಾಗುತ್ತದೆ. ವಡಗೇರಾ ತಾಲ್ಲೂಕಿನ ವ್ಯಾಪ್ತಿಯಲ್ಲಿ ಅನೇಕ ರೈತರು ಹತ್ತಿ ಬೆಳೆಯನ್ನು ಬೆಳೆದಿದ್ದಾರೆ. ವಾಣಿಜ್ಯ ಬೆಳೆಯಾದ ಹತ್ತಿಯಲ್ಲಿ ಉತ್ತುಮವಾದ ಇಳುವರಿ ಬಂದರೆ ರೈತರಿಗೆ ಅನುಕೂಲವಾಗುತ್ತಿದೆ ಇಲ್ಲದಿದ್ದರೆ ನಷ್ಟವನ್ನು ಅನುಭವಿಸಬೇಕಾಗುತ್ತದೆ. ಅದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಂದು ಕ್ವಿಂಟಲ್ ಹತ್ತಿಗೆ ₹10,000 ಸಾವಿರ ನಿಗದಿಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.