ADVERTISEMENT

ಕೋವಿಡ್‌ 19: ಇಬ್ಬರ ಆರೋಗ್ಯ ಸ್ಥಿರ, 1,609 ವರದಿ ನೆಗೆಟಿವ್, 254 ವರದಿ ಬಾಕಿ

​ಪ್ರಜಾವಾಣಿ ವಾರ್ತೆ
Published 12 ಮೇ 2020, 16:39 IST
Last Updated 12 ಮೇ 2020, 16:39 IST
ಪ್ರಕಾಶ್‌ ಜಿ. ರಜಪೂತ, ಹೆಚ್ಚುವರಿ ಜಿಲ್ಲಾಧಿಕಾರಿ
ಪ್ರಕಾಶ್‌ ಜಿ. ರಜಪೂತ, ಹೆಚ್ಚುವರಿ ಜಿಲ್ಲಾಧಿಕಾರಿ   

ಯಾದಗಿರಿ: ಕೊರೊನಾ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ್ದ ಮಾದರಿಗಳ ಪೈಕಿ ಮೇ 12ರಂದು ಪಿ-867, ಪಿ-868 2 ಮಾದರಿಗಳು ಪಾಸಿಟಿವ್ ಬಂದಿದ್ದು, ಇವರ ಆರೋಗ್ಯ ಸ್ಥಿರವಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ತಿಳಿಸಿದ್ದಾರೆ.

ಮಂಗಳವಾರ 114 ಮಾದರಿಗಳ ವರದಿ ನೆಗೆಟಿವ್ ಬಂದಿದ್ದು, ಮೇ 12ರವರೆಗೆ ಒಟ್ಟು 1,609 ಮಾದರಿಗಳ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಮಂಗಳವಾರ ಕಳುಹಿಸಲಾದ 174 ಹೊಸ ಮಾದರಿಗಳು ಸೇರಿದಂತೆ 254 ಮಾದರಿಗಳ ವರದಿ ಬರಬೇಕಿದೆ. ವೈರಸ್ ತಡೆಗೆ ಜಿಲ್ಲಾಡಳಿತವು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕಪಡಬಾರದು ಎಂದು ಹೇಳಿದ್ದಾರೆ.

ಹೊಸ ಜಿಲ್ಲಾಸ್ಪತ್ರೆಯ ಐಸೊಲೇಷನ್ ವಾರ್ಡ್‍ನಲ್ಲಿ 7 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಸುರಪುರ ಸೂಪರ್ ಕ್ವಾರಂಟೈನ್ ಸೆಂಟರ್‌ನಲ್ಲಿ 48 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದ 24 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 63 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ವಿದೇಶಗಳಿಂದ ಜಿಲ್ಲೆಗೆ ಮರಳಿ ಬಂದಿರುವ 71 ಜನರ ಅವಲೋಕನ ಅವಧಿ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ಜಿಲ್ಲೆಯ ಒಟ್ಟು 32 ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್ ಸೆಂಟರ್‌ಗಳಿಗೆ ಮೇ 12ರಂದು 1,236 ಜನ ಸೇರ್ಪಡೆಯಾಗಿದ್ದು, ಒಬ್ಬರು ಬಿಡುಗಡೆಯಾಗಿದ್ದಾರೆ. ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿ ಒಟ್ಟು 3,088 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.

(ಪಿ–867 ಮತ್ತು ಪಿ–868) ಪ್ರಾಥಮಿಕ ಸಂಪರ್ಕ ಹೊಂದಿದ್ದರು ಎನ್ನಲಾದ ಇಬ್ಬರು ವ್ಯಕ್ತಿಗಳನ್ನು ಗುರುತಿಸಲಾಗಿದೆ. ಸುರಪುರದ ವಾರ್ಡ್‌ ಸಂಖ್ಯೆ 10ರ ಆಸರ್‌ ಮೊಹಲ್ಲಾ ಪ್ರದೇಶದ 100 ಮೀಟರ್‌ ವ್ಯಾಪ್ತಿಯನ್ನು ಕಂಟೇನ್ಮೆಂಟ್‌ ಝೋನ್‌, 5 ಕಿ.ಮೀ ಭೌಗೋಳಿಕ ಪ್ರದೇಶವನ್ನು ಬಫರ್‌ ಝೋನ್‌ ಎಂದು ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.