ADVERTISEMENT

ಯಾದಗಿರಿ| ಕೋವಿಡ್‌– 19ಗೆ ಸಂಬಂಧಿಸಿದ 109 ವರದಿ ಬಾಕಿ

ಜಿಲ್ಲೆಯ 1,451 ವರದಿ ನೆಗೆಟಿವ್, ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿ 390 ಜನ

​ಪ್ರಜಾವಾಣಿ ವಾರ್ತೆ
Published 9 ಮೇ 2020, 16:23 IST
Last Updated 9 ಮೇ 2020, 16:23 IST
ಪ್ರಕಾಶ್ ಜಿ.ರಜಪೂತ
ಪ್ರಕಾಶ್ ಜಿ.ರಜಪೂತ   

ಯಾದಗಿರಿ: ನೋವೆಲ್ ಕೊರೊನಾ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ್ದ ಮಾದರಿಗಳ ಪೈಕಿ ಮೇ 9ರವರೆಗೆ ಒಟ್ಟು 1,451 ಮಾದರಿಗಳ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಶನಿವಾರ ಕಳುಹಿಸಲಾದ 35 ಹೊಸ ಮಾದರಿಗಳು ಸೇರಿದಂತೆ 109 ಮಾದರಿಗಳ ವರದಿ ಬರಬೇಕಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೊಸ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್‍ನಲ್ಲಿ 5 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಸುರಪುರ ಸೂಪರ್ ಕ್ವಾರಂಟೈನ್ ಸೆಂಟರ್‌ನಲ್ಲಿ 42 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದವರು 22 ಜನ, ದ್ವಿತೀಯ ಸಂಪರ್ಕದಲ್ಲಿದ್ದವರು 63 ಜನರಿದ್ದು ಇವರನ್ನು ಪ್ರತ್ಯೇಕವಾಗಿರಿಸಲಾಗಿದೆ. ವಿದೇಶಗಳಿಂದ ಜಿಲ್ಲೆಗೆ ಮರಳಿ ಬಂದಿರುವ 71 ಜನರ ಅವಲೋಕನ ಅವಧಿ ಪೂರ್ಣಗೊಂಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿ 390 ಜನ

ADVERTISEMENT

ಜಿಲ್ಲೆಯ ಗುಂಜನೂರ ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿ 21 ಜನ, ಹುಣಸಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 139 ಜನ, ಕೆಂಭಾವಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ಜನ, ವಡಗೇರಾ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 163 ಜನ ಮತ್ತು ರಾಜನಕೊಳ್ಳೂರಿನಲ್ಲಿ 50 ಜನ ಸೇರಿದಂತೆ ಒಟ್ಟು 390 ಜನರನ್ನು ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ. ಅರಕೇರಾ (ಕೆ) ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿದ್ದ 50 ಜನರನ್ನು ಶನಿವಾರ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾಡಳಿತದ ಕಂಟ್ರೋಲ್ ರೂಂ ಸಹಾಯವಾಣಿ ಸಂಖ್ಯೆ 08473-253950 ಗೆ ಬರುವ ಕರೆಗಳಿಗಾಗಿ 3 ಸಿಬ್ಬಂದಿಯನ್ನು ಮೀಸಲಿರಿಸಿದ್ದು, ಶನಿವಾರ 11 ಕರೆಗಳು ಸ್ವೀಕೃತವಾಗಿವೆ. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಖಚಿತ ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿರುವುದಿಲ್ಲ. ವೈರಸ್ ತಡೆಗೆ ಜಿಲ್ಲಾಡಳಿತವು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕಪಡಬಾರದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.