ADVERTISEMENT

ಯಾದಗಿರಿ: 858 ಕೋವಿಡ್‌ ವರದಿ ಬಾಕಿ

ಮತ್ತೆ 36 ಜನ ಗುಣಮುಖ, ಒಟ್ಟು 254 ಜನ ಆಸ್ಪತ್ರೆಯಿಂದ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 15:37 IST
Last Updated 12 ಜೂನ್ 2020, 15:37 IST
ಕೋವಿಡ್‍ನಿಂದ ಸಂಪೂರ್ಣ ಗುಣಮುಖನಾದ ವ್ಯಕ್ತಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ‌ ಹೂಗುಚ್ಛ, ಪ್ರಮಾಣ ಪತ್ರ ನೀಡಿ ಬೀಳ್ಕೊಟ್ಟರು
ಕೋವಿಡ್‍ನಿಂದ ಸಂಪೂರ್ಣ ಗುಣಮುಖನಾದ ವ್ಯಕ್ತಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ‌ ಹೂಗುಚ್ಛ, ಪ್ರಮಾಣ ಪತ್ರ ನೀಡಿ ಬೀಳ್ಕೊಟ್ಟರು   

ಯಾದಗಿರಿ: ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್‌–19 ಪ್ರಕರಣಗಳು ಪತ್ತೆಯಾಗಿಲ್ಲ. ಇದರಿಂದ ನೆಮ್ಮದಿಯ ನಿಟ್ಟಿಸಿರು ಬಿಡುವಂತೆ ಆಗಿದೆ.

ಜಿಲ್ಲೆಯಲ್ಲಿ ಕೋವಿಡ್-19 ದೃಢಪಟ್ಟ 735 ವ್ಯಕ್ತಿಗಳ ಪೈಕಿ ಶುಕ್ರವಾರ ಮತ್ತೆ 36 ಜನ ಗುಣಮುಖರಾಗಿದ್ದು, ಜೂನ್ 12ರವರೆಗೆ 254 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. ಉಳಿದ 480 ಪ್ರಕರಣಗಳು ಸಕ್ರಿಯವಾಗಿವೆ.

ಕೊರೊನಾ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ ಮಾದರಿಗಳ ಪೈಕಿ ಶುಕ್ರವಾರ 172 ನೆಗೆಟಿವ್ ವರದಿ ಸೇರಿ ಈವರೆಗೆ 18,122 ಮಾದರಿಗಳ ವರದಿ ನೆಗೆಟಿವ್ ಬಂದಿವೆ. ಹೊಸದಾಗಿ ಕಳುಹಿಸಲಾದ 223 ಮಾದರಿಗಳು ಸೇರಿದಂತೆ 858 ಮಾದರಿಗಳ ವರದಿ ಬರಬೇಕಿದೆ.

ADVERTISEMENT

ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1,160 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2,557 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 40 ಕಂಟೇನ್‍ಮೆಂಟ್ ಝೋನ್‍ಗಳನ್ನು ರಚಿಸಲಾಗಿದೆ.

ಹೊಸ ಜಿಲ್ಲಾಸ್ಪತ್ರೆ, ಶಹಾಪುರ, ಸುರಪುರ, ಏಕಲವ್ಯ ಕೊರೊನಾ ಕೇರ್ ಸೆಂಟರ್‌ನಲ್ಲಿ 465 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 21 ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್ ಸೆಂಟರ್‌ಗಳಲ್ಲಿ 1,333 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.