ADVERTISEMENT

₹71ಸಾವಿರ ಮೌಲ್ಯದ ಅಕ್ರಮ ಮದ್ಯ ವಶ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2019, 14:42 IST
Last Updated 21 ಮಾರ್ಚ್ 2019, 14:42 IST

ಯಾದಗಿರಿ: ಜಿಲ್ಲೆಯ ಯಾದಗಿರಿ ಮತ್ತು ಶಹಾಪುರ ವಲಯದಲ್ಲಿ ಬುಧವಾರ ದಾಳಿ ನಡೆಸಿದ ಅಬಕಾರಿ ಇಲಾಖೆಯ ವಿಶೇಷ ತಂಡದ ಅಧಿಕಾರಿಗಳು ೫ ಪ್ರಕರಣಗಳನ್ನು ದಾಖಸಿಕೊಂಡು ₹ 71,528 ಮೌಲ್ಯದ ಅಕ್ರಮ ಮದ್ಯ ವಶಪಡಿಸಿಕೊಂಡಿದ್ದಾರೆ ಎಂದು ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ.

ಶಹಾಪುರ ಉಪ ವಿಭಾಗದ ನಿರೀಕ್ಷಕ ಗೋಪಾಳೆ ಪಂಡಿತ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಿ, ಅಂದಾಜು ₹ 31,104 ಮೌಲ್ಯದ 51 ಲೀಟರ್ ಮದ್ಯ ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಯಾದಗಿರಿ ವಲಯದಲ್ಲಿ ಅಬಕಾರಿ ನಿರೀಕ್ಷಕ ಪ್ರಕಾಶ ಮಾಕೊಂಡ ಅವರು ದಾಳಿ ನಡೆಸಿ, ಒಂದು ಪ್ರಕರಣವನ್ನು ದಾಖಲಿಸಿ, ಅಂದಾಜು 15,552 ಮೊತ್ತದ25 ಲೀಟರ್ ಮದ್ಯ, 3,920 ಮೌಲ್ಯದ 23 ಲೀಟರ್ ಬೀಯರ್ ಹಾಗೂ ಒಂದು ಆಟೊರಿಕ್ಷಾ ವಶಪಡಿಸಿಕೊಂಡಿದ್ದಾರೆ.

ಶಹಾಪುರ ವಲಯ ವ್ಯಾಪ್ತಿಯಲ್ಲಿ ಅಬಕಾರಿ ನಿರೀಕ್ಷಕ ಅಬೂಬಕರ ಮುಜಾವರ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಿ, ಅಂದಾಜು ₹ 20,952 ಮೊತ್ತದ 34 ಲೀಟರ್ ಮದ್ಯ ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿಯಲ್ಲಿ ಅಬಕಾರಿ ನಿರೀಕ್ಷಕರೊಂದಿಗೆ ಅಬಕಾರಿ ಉಪ ನಿರೀಕ್ಷಕರು, ಸಿಬ್ಬಂದಿ ಪಾಲ್ಗೊಂಡಿದ್ದ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.