ADVERTISEMENT

ಬೆಳೆ ವಿಮೆ: ಪ್ರಚಾರ ವಾಹನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2021, 3:57 IST
Last Updated 2 ಜುಲೈ 2021, 3:57 IST
ಯಾದಗಿರಿಯಲ್ಲಿ ಬೆಳೆ ವಿಮೆ ಮಾಹಿತಿ ಒಳಗೊಂಡ ಪ್ರಚಾರದ ವಾಹನಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಚಾಲನೆ ನೀಡಿದರು
ಯಾದಗಿರಿಯಲ್ಲಿ ಬೆಳೆ ವಿಮೆ ಮಾಹಿತಿ ಒಳಗೊಂಡ ಪ್ರಚಾರದ ವಾಹನಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಚಾಲನೆ ನೀಡಿದರು   

ಯಾದಗಿರಿ: ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲೆಯಲ್ಲಿ ಜುಲೈ 1 ರಿಂದ ಜುಲೈ 7 ರ ವರೆಗೆ ಬೆಳೆ ವಿಮೆ ಪ್ರಚಾರ ಮತ್ತು ಜಾಗೃತಿ ಸಪ್ತಾಹ ಆಚರಿಸಲಾಗುತ್ತಿದೆ. ಈಕಾರಣದಿಂದ ಬೆಳೆ ವಿಮೆ ಮಾಹಿತಿ ಒಳಗೊಂಡ ಪ್ರಚಾರದ ವಾಹನಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಕಚೇರಿಯ ಆವರಣದಲ್ಲಿ ಚಾಲನೆ ನೀಡಿದರು.

ಈ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಉಪವಿಭಾಗಾಧಿಕಾರಿ ಪ್ರಶಾಂತ ಹನಗಂಡಿ, ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್, ಇನ್ಶುರೆನ್ಸ್ ಕಂಪನಿಯ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಲಕ್ಷ್ಮೀಕಾಂತ, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಕೃಷಿ ಇಲಾಖೆ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT