ADVERTISEMENT

ಕೇಂದ್ರ, ರಾಜ್ಯ ಸರ್ಕಾರ ರೈತರ ಪರ: ಕೃಷಿ ಸಚಿವ ಬಿ.ಸಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2020, 16:18 IST
Last Updated 8 ಏಪ್ರಿಲ್ 2020, 16:18 IST
ಬಿ.ಸಿ.ಪಾಟೀಲ
ಬಿ.ಸಿ.ಪಾಟೀಲ   

ಯಾದಗಿರಿ: ಆಲಿಕಲ್ಲು ಮಳೆ ಬಿದ್ದು, ಬೆಳೆ ನಾಶವಾಗಿರುವ ಬಗ್ಗೆ ಸರ್ವೆ ಮಾಡಲು ತಿಳಿಸಲಾಗಿದೆ. ಸರ್ವೆ ವರದಿ ಬಂದ ನಂತರ ಪರಿಹಾರದ ಬಗ್ಗೆ ತೀರ್ಮಾನಿಸಲಾಗುವುದು. ಕೇಂದ್ರ, ರಾಜ್ಯ ಸರ್ಕಾರಗಳು ರೈತರ ಪರವಾಗಿ ಕಾರ್ಯ ನಿರ್ವಹಿಸುತ್ತವೆ. ರೈತರನ್ನು ಯಾವುದೇ ಕಾರಣಕ್ಕೂ ಸರ್ಕಾರ ಕೈಬಿಡುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳೆ ವಿಮೆ ಕೆಲಕಡೆ ಹೊಂದಾಣಿಕೆ ಆಗುತ್ತಿಲ್ಲ. ಜಿಪಿಎಸ್‌ 25 ಮೀಟರ್‌ ತೆಗೆದುಕೊಳ್ಳುತ್ತಿದೆ. ಹೀಗಾಗಿ ಆ ಸ್ಥಳದಲ್ಲಿ ಮಹಜರ್‌ ಮಾಡಿಸಿದರೆ ಈ ತೊಂದರೆ ನೀಗಿಸಬಹುದು. ಈಗಾಗಲೇ ರೈತ ಸಂಪರ್ಕ ಕೇಂದ್ರಗಳನ್ನು ತೆರೆಯಲಾಗಿದೆ. ಕೃಷಿ ವಸ್ತುಗಳನ್ನು ಸಾಗಿಸಲು ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದರು.

ರೈತರಿಗಾಗಿಫಸಲ್‌ ಭೀಮಾ ಯೋಜನೆ ಜಾರಿಗೆ ತರಲಾಗಿದೆ. ಹೀಗಾಗಿ ಕಲ್ಲಂಗಡಿ, ಪಪ್ಪಾಯ ಹಣ್ಣು ಕೊಳೆತು ರೈತರು ನಷ್ಟ ಹೊಂದುತ್ತಿರುವ ಹಿನ್ನೆಲೆಯಲ್ಲಿ ದಾನ ಮಾಡುವವರು ಮುಂದೆ ಬಂದರೆ ಹೂ ಮಾಲೆ ಹಾಕಿ ಸ್ವಾಗತ ಮಾಡುತ್ತೇವೆ. ಇಂಥ ಕೆಲಸ ಮಾಡಲು ಮುಂದೆ ಬಂದರೆ ಸ್ವಾಗತ ಎಂದರು.

ADVERTISEMENT

ಲಾಕ್‌ಡೌನ್‌ ಇದ್ದರಿಂದ ಭತ್ತವನ್ನು ಖರೀದಿ ಕಡಿಮೆ ಬೆಲೆಗೆ ಖರೀದಿಸುತ್ತಿರುವ ದೂರು ಬಂದರೆ ತಕ್ಷಣ ಸ್ಥಳೀಯ ಅಧಿಕಾರಿಗಳ ಗಮನಕ್ಕೆ ತನ್ನಿ ಎಂದು ಹೇಳಿದರು.

‘ಕೃಷಿ ಸಚಿವರು ಜಿಲ್ಲೆಗೆ ಬಂದು ಸಭೆ ಮಾಡಿದ್ದು ಬಿಟ್ಟರೆ ಮಂಗಳವಾರ ಸಾಲ ಬಾಧೆ ತಾಳದೆ ಆತ್ಮಹತ್ಯೆ ಮಾಡಿಕೊಂಡಿರುವ ಕುಟುಂಬಕ್ಕೆ ಸಾಂತ್ವನ ಅಥವಾ ಅವರ ಮನೆಗೆ ಭೇಟಿ ನೀಡಿಲ್ಲ’ ಎಂದು ವಿರೋಧ ಪಕ್ಷದ ಮುಖಂಡರು ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.